ಬೆಂಗಳೂರಿನಲ್ಲಿ ಪಟಾಕಿ ಅವಘಡದಿಂದ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಕೆ

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಟಾಕಿ ಸಂಬಂಧಿತ ಅವಘಡದಿಂದ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಗಾಯಗೊಂಡವರ ಪೈಕಿ ಸರ್ಕಾರಿ ಆಸ್ಪತ್ರಗೆ 17 ಜನ ದಾಖಲಾಗಿದ್ದರೆ, 26 ಜನ ಖಾಸಗಿ ಆಸ್ಪತ್ರೆ ಬಾಗಿಲು ತಟ್ಟಿದ್ದಾರೆ.

ದೀಪಾವಳಿಯ ಮೊದಲ ದಿನ ಅಂದರೆ ನರಕ ಚತುರ್ದಶಿಯಂದು ಮಕ್ಕಳು ಸೇರಿದಂತೆ 26 ಜನರು ಗಾಯಗೊಂಡಿದ್ದರು. ಇದೀಗ ದೀಪಾವಳಿ 2ನೇ ದಿನ ಅಮಾವಸ್ಯೆಯಂದು ಗಾಯಗೊಂಡವರ ಸಂಖ್ಯೆ 26ರಿಂದ 3ಕ್ಕೆ ಏರಿಕೆಯಾಗಿದೆ.

ನಿನ್ನೆ(ಸೋಮವಾರ) ರಾಮಮೂರ್ತಿ ನಗರದ ಮೂರುವರೆ ವರ್ಷದ ಮಗುವಿಗೂ ಪಟಾಕಿಯಿಂದ ಗಂಭೀರ ಗಾಯವಾಗಿದೆ. ಸುರುಸುರು ಬತ್ತಿ ಹಚ್ಚುವಾಗ ಕಣ್ಣಿಗೆ ಕಿಡಿ ತಾಗಿದ್ದು, ಮಗುವಿಗೆ ಮೈನರ್‌ ಇಂಜುರಿಯಾಗಿದೆ. ಇನ್ನು ಶ್ರೀರಾಂಪುರದ ಯುವಕನೊಬ್ಬ ಏರಿಯಾದಲ್ಲಿ ನಡೆದುಕೊಂಡು ಹೋಗುತ್ತಿದ್ದ ಈ ವೇಳೆ ಯಾರೋ ಹಚ್ಚಿದ ಪಟಾಕಿ ಯುವಕನ ಕಣ್ಣಿಗೆ ಸಿಡಿದಿದೆ. ಇದರಿಂದ ಐಬಾಲ್‌ಗೆ ಗಂಭೀರ ಗಾಯ ಆಗಿದ್ದು, ಒಳಗಡೆ ರಕ್ತ ಹೆಪ್ಪುಗಟ್ಟಿದೆ. ಇದೇ ರೀತಿ ಬನ್ನೇರುಘಟ್ಟದ ವ್ಯಕ್ತಿಯ ಕಣ್ಣಿಗೆ ಲಕ್ಷ್ಮೀ ಪಟಾಕಿ ಸಿಡಿದು ಗಾಯವಾಗಿದೆ.

ಸಂಜೆ 6 ರ ವರೆಗೆ ಮಾತ್ರ ಪಟಾಕಿ ಮಾರಾಟಕ್ಕೆ ಬಿಬಿಎಂಪಿ ಅವಕಾಶ ನೀಡಿದೆ. ಆದ್ರೆ, ರಾತ್ರಿ 10 ಗಂಟೆ ಆದರೂ ವಿಜಯನಗರದ ಆರ್ ಪಿಸಿ ಲೇಔಟ್ ನಲ್ಲಿರೋ ಮೈದಾನದಲ್ಲಿ ಪಟಾಕಿ ಮಾರಾಟ ಮಾಡಲಾಗಿದೆ.

Loading

Leave a Reply

Your email address will not be published. Required fields are marked *