ಅತಂತ್ರ ವಿಧಾನಸಭೆ, ಸಮ್ಮಿಶ್ರ ಸರ್ಕಾರದ ಪ್ರಶ್ನೆಯೇ ಇಲ್ಲ, BJPಗೆ ಸಂಪೂರ್ಣ ಬಹುಮತ- BSY

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಮತದಾನ ಮುಕ್ತಾಯಗೊಂಡಿದೆ. ಸಂಜೆ 6ರವರೆಗೆ ಶೇ.66.02ರಷ್ಟು ಮತದಾನವಾಗಿದೆ. ಈ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿದ್ದು, ಕಾಂಗ್ರೆಸ್ ಮುನ್ನೆಡೆ ಸಾಧಿಸಿದ್ರೇ, ಬಿಜೆಪಿ ಎರಡನೇ ಸ್ಥಾನ, ಜೆಡಿಎಸ್ 3ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳುವುದಾಗಿ ಹೇಳಿದೆ.

ಆದ್ರೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ( Farmer CM BS Yediyurappa ) ಮಾತ್ರ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಇಲ್ಲ, ಸಮ್ಮಿಶ್ರ ಸರ್ಕಾರದ ಪ್ರಶ್ನೆಯೂ ಇಲ್ಲ. ಬಿಜೆಪಿಗೆ ಸಂಪೂರ್ಣ ಬಹುಮತ ಬರುವುದಾಗಿ ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಲೂ ನಾವು ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದ್ದೇವೆ ಎಂದು ನನಗೆ 100% ವಿಶ್ವಾಸವಿದೆ ಎಂದರು.

ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಅಥವಾ ಸಮ್ಮಿಶ್ರ ಸರ್ಕಾರದ ಪ್ರಶ್ನೆಯೇ ಇಲ್ಲ, ಆದರೆ ರಾಷ್ಟ್ರೀಯ ನಾಯಕತ್ವವು ಅಂತಿಮ ಕರೆಯನ್ನು ತೆಗೆದುಕೊಳ್ಳುತ್ತದೆ. ನಾವು 115-117 ಸ್ಥಾನಗಳನ್ನು ಪಡೆಯಲಿದ್ದೇವೆ. ಆದ್ದರಿಂದ ಈಗ ಜೆಡಿಎಸ್ ನೊಂದಿಗೆ ಸೇರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಾದು ನೋಡೋಣ ಎಂದು ಹೇಳಿದರು.

Loading

Leave a Reply

Your email address will not be published. Required fields are marked *