‘ಕಂಪ್ಲೀಟ್ ಗ್ರೌಂಡ್ ರಿಪೋರ್ಟ್’ನಂತೆ BJPಗೆ ಸಂಪೂರ್ಣ ಬಹುಮತ – ಸಿಎಂ ಬೊಮ್ಮಾಯಿ‌

ಹಾವೇರಿ: ಎಕ್ಸಿಟ್ ಪೋಲ್ ಒಂದೊಂದು ರೀತಿ ತೋರಿಸುತ್ತಿವೆ. ನಮ್ಮ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಮೂಲಕ ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಹಾವೇರಿಯಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ.

5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದು ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಸಂಪೂರ್ಣ ಬಹುಮತ ಸಿಗುತ್ತದೆ.

ಚುನಾವಣೆಯ ನಿಜವಾದ ಫಲಿತಾಂಶಕ್ಕೆ ಮೇ 13ರವರೆಗೆ ಕಾಯೋಣ. ರೆಸಾರ್ಟ್‌ ರಾಜಕೀಯ ಇಲ್ಲ. ಯಾವುದೇ ರೆಸಾರ್ಟ್ ಆಗುವುದಿಲ್ಲ. ಈ ಬಾರಿ ಆ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಜೆಡಿಎಸ್ ಕಿಂಗ್ ಮೇಕರ್ ಆಗುವ ಅವಶ್ಯಕತೆಯೇ ಇಲ್ಲ ಎಂದರು.

Loading

Leave a Reply

Your email address will not be published. Required fields are marked *