ನನಗೆ 3 ಪಟ್ಟು ಜಾಸ್ತಿ ದಂಡ ಹಾಕಿದ್ದಾರೆ: ಬೆಸ್ಕಾಂ ವಿರುದ್ಧ ಕುಮಾರಸ್ವಾಮಿ ಆರೋಪ

ಬೆಂಗಳೂರು: ವಿದ್ಯುತ್ ಕಳವು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 2,526 ರೂ. ಬಿಲ್ ಬದಲು 68,526 ರೂಪಾಯಿ ಬಿಲ್ ನೀಡಿದ್ದಾರೆ. ಬೆಸ್ಕಾಂ ಇಲಾಖೆ ಅಧಿಕಾರಿಗಳು 68,526 ರೂಪಾಯಿ ದಂಡ ವಿಧಿಸಿದ್ದಾರೆ. ಹಣ ಕಟ್ಟಲು ನಾನು ಸಿದ್ಧನಿದ್ದೇನೆ. ಆದರೆ ಬೆಸ್ಕಾಂ 2.5 ಕಿಲೋ ವ್ಯಾಟ್​​​ಗೆ ಲೆಕ್ಕ ತೆಗೆದುಕೊಂಡಿದೆ. 7 ದಿನಕ್ಕೆ 71 ಯೂನಿಟ್ ಆಗಲಿದೆ ಅಂತ ಕೊಟ್ಟಿದ್ದಾರೆ. 71 ಯೂನಿಟ್​ಗೆ ಮೂರು ಪಟ್ಟು ದಂಡ ಹಾಕಿದ್ದಾರೆ. ಆದರೆ ಕರೆಂಟ್​ ಬಿಲ್​ ಬಗ್ಗೆ ಪುನರ್​ ಪರಿಶೀಲನೆ ಮಾಡಲು ಹೇಳಿದ್ದೇನೆ. ನೀವು ನೀಡಿದ ಬಿಲ್ ಕೂಡ ಸರಿ ಇಲ್ಲ ಅಂತ ಪ್ರತಿಭಟನೆ ಮಾಡಿದ್ದೇನೆ. ಬೆಸ್ಕಾಂ ಇಲಾಖೆ ಪ್ರಕಾರ 2,526 ರೂಪಾಯಿ ಬಿಲ್​​ ನೀಡಬೇಕಿತ್ತು. ಆದರೆ ಬೆಸ್ಕಾಂ ಇಲಾಖೆ 68,526 ರೂ. ಕರೆಂಟ್​ ಬಿಲ್ ನೀಡಿದೆ ಎಂದು ಬೆಸ್ಕಾಂ ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಪ ಮಾಡಿದರು.

Loading

Leave a Reply

Your email address will not be published. Required fields are marked *