ODI WC Semi Final: ದಕ್ಷಿಣ ಆಫ್ರಿಕಾ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಆಸ್ಟ್ರೇಲಿಯಾ

ಸ್ಟ್ರೇಲಿಯಾ ತಂಡ ಏಕದಿನ ವಿಶ್ವಕಪ್​ನ ಫೈನಲ್​ಗೇರಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆದ ಗುರುವಾರ ನಡೆದ ಸೌತ್ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ತಂಡವು ಏಕದಿನ ವಿಶ್ವಕಪ್​​ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ರೋಚಕ ಜಯ ಸಾಧಿಸಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡ 49.4 ಓವರ್​ಗಳಲ್ಲಿ 212 ರನ್​ಗಳಿಸಿ ಆಲೌಟ್ ಆಯಿತು.

213 ರನ್​ಗಳ ಸುಲಭ ಗುರಿ ಪಡೆದ ಆಸ್ಟ್ರೇಲಿಯಾ ತಂಡವು 193 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇದಾಗ್ಯೂ ಅಂತಿಮ ಹಂತದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಪ್ಯಾಟ್ ಕಮಿನ್ಸ್ ಹಾಗೂ ಮಿಚೆಲ್ ಸ್ಟಾರ್ಕ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡ 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಫೈನಲ್​ಗೆ ಪ್ರವೇಶಿಸಿರುವ ಆಸ್ಟ್ರೇಲಿಯಾ ತಂಡವು ನವೆಂಬರ್ 19 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿಯಲಿದೆ.

ಏಕದಿನ ಕ್ರಿಕೆಟ್​ನಲ್ಲಿ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು 110 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 55 ಪಂದ್ಯಗಳಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದರೆ, 51 ಮ್ಯಾಚ್​ಗಳಲ್ಲಿ ಆಸ್ಟ್ರೇಲಿಯಾ ಗೆಲುವು ದಾಖಲಿಸಿದೆ. ಇನ್ನು 3 ಮ್ಯಾಚ್​ಗಳು ಕಾರಣಾಂತರಗಳಿಂದ ರದ್ದಾದರೆ, 1 ಪಂದ್ಯ ಟೈ ಆಗಿತ್ತು.

Loading

Leave a Reply

Your email address will not be published. Required fields are marked *