ಚಿಕ್ಕಮಗಳೂರು : ಬಿಜೆಪಿ ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಬುಧವಾರ ರಾತ್ರಿ ಕಿಡ್ನಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿ.ಟಿ. ರವಿ ಅವರು ಮತದಾನದ ಬಳಿಕ ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿ.ಟಿ. ರವಿ ಅವರಿಗೆ ಕಿಡ್ನಿ ಸಮಸ್ಯೆಯಾಗಿದೆ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಾಸಕ ಸಿ.ಟಿ ರವಿ ಅವರು ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿದ್ದ ವೇಳೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಬಿಜೆಪಿ ಕಚೇರಿಯಿಂದ ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಸಿ.ಟಿ ರವಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಮತ್ತೊಮ್ಮೆ ಸಿ.ಟಿ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.