ಜೈಪುರ: ಕಾಂಗ್ರೆಸ್ ಆಡಳಿತದಲ್ಲಿರುವ ರಾಜಸ್ಥಾನದಲ್ಲಿ (Rajasthan) ಅಭಿವೃದ್ಧಿ ಕುಂಠಿತವಾಗಿದೆ. ಅಲ್ಲದೇ ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯವನ್ನು ಸಂಘರ್ಷಕ್ಕೆ ಎಳೆಯಲಾಗಿದ್ದು, ಜನರಲ್ಲಿ ಸಂಘರ್ಷ ಮತ್ತು ಭಯೋತ್ಪಾದನೆಯ ಮನಸ್ಥಿತಿ ಹೆಚ್ಚಾಗಿದೆ. ಊಹೆಗೂ ನಿಲುಕದ ಹಿಂಸಾಚಾರ ಘಟನೆಗಳು ಈ ನೆಲದಲ್ಲಿ ನಡೆದಿವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆತಂಕ ವ್ಯಕ್ತಪಡಿಸಿದ್ದಾರೆ.
ನವೆಂಬರ್ 25 ರಂದು ನಡೆಯಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆ (Rajasthan Assembly Elections) ಹಿನ್ನೆಲೆ ಪಾಲಿ ನಗರದಲ್ಲಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ಮೋದಿ, ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು (Congress Party) ಭ್ರಷ್ಟಾಚಾರ ಮತ್ತು ತುಷ್ಟೀಕರಣ ರಾಜಕೀಯದಲ್ಲಿ ತೊಡಗಿದೆ. ಕುಟುಂಬ ರಾಜಕಾರಣದ ರಾಜಕೀಯವೇ ಅವರಿಗೆ ಸರ್ವಸ್ವವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.