ಬಿಜೆಪಿ ಸರ್ಕಾರ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರಲಿದೆ : ಮಾಜಿ ಸಿಎಂ ಬಿಎಸ್ ವೈ

ಬೆಂಗಳೂರು : ರಾಜ್ಯದಲ್ಲಿ ಈ ಬಾರಿಯೂ ಬಿಜೆಪಿ ಸರ್ಕಾರ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿದೆ.

ಕರ್ನಾಟಕ ಜನರ ನಾಡಿಮಿಡಿತ ನಮಗೆ ಗೊತ್ತಿದೆ. ಬಿಜೆಪಿಗೆ ಬಹುಮತ ಬರುತ್ತೆ. ಸರ್ಕಾರ ರಚನೆ ಮಾಡುತ್ತೇವೆ. ಬಿಜೆಪಿಗೆ 115 ರಿಂದ 117 ಸ್ಥಾನ ಗೆಲ್ಲಲಿದೆ. ಜೆಡಿಎಸ್ ಜೊತೆಗೆ ಯಾವುದೇ ಮಾತುಕತೆ ಆಗಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಈ ಬಾರಿಯೂ ಸಂಪೂರ್ಣ ಬಹುಮತದೊಂದಿಗೆ ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮತದಾನೋತ್ತರ ಸಮೀಕ್ಷೆಗಳು ಕಳೆದ ಬಾರಿ ಕಾಂಗ್ರೆಸ್ 107 ಕ್ಕೂ ಅಧಿಕ ಸ್ಥಾನ ಅಂತ ಹೇಳಿದ್ದವು. ಆದರೆ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆಯಿದೆ. ಮೋದಿಯವರ ಪ್ರಚಾರ ನಮಗೆ ಪ್ಲಸ್ ಆಗಿದೆ. ಯುವಕರು ಮತ್ತು ಮಹಿಳೆಯರು ನಮ್ಮ ಪರವಾಗಿ ಮತದಾನ ಮಾಡಿದ್ದಾರೆ. ನನಗೆ ವಿಶ್ವಾಸವಿದೆ ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ.

ಶಿಗ್ಗಾವಿ ಜನತೆ ತೋರಿದ ಪ್ರೀತಿಗೆ ನಾನು ಚಿರಖುಣಿ. ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಿದರು. ನನ್ನ ವಿರುದ್ಧ ಷಡ್ಯಂತರ, ಅಪಪ್ರಚಾರ ಮಾಡಿದರೂ ನಿನ್ನೆಗೆ ಮುಗಿದಿದೆ. ನಾನು ದೊಡ್ಡ ಬಹುಮತದಿಂದ ಗೆಲ್ಲುತ್ತೇನೆ.

Loading

Leave a Reply

Your email address will not be published. Required fields are marked *