ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು, ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಡೂರು ತಾಲೂಕಿನ ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಕಾರು-ಟಿಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ.
ಕಾರಿನಲ್ಲಿದ್ದ ಗಿರಿಧರ್ (46) ಮಯಂಕ್(3) ಮೃತ ರ್ದುದೈವಿಗಳು.
ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿ.ಟಿ ವಾಹನಕ್ಕೆ ಕಾರು ಡಿಕ್ಕಿಯಾಗಿದ್ದು, ಅದರ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದೆ. ಟಿ.ಟಿ ವಾಹನದಲ್ಲಿದ್ದ ಕೇರಳ ಮೂಲದ ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.