Bengaluru Kambala: ಸಾರ್ವಜನಿಕರೇ ಗಮನಿಸಿ.. ಅರಮನೆ ಮೈದಾನ ಸುತ್ತ ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು:- ನಗರದ ಕಂಬಳ ವೀಕ್ಷಣೆಗೆ ಲಕ್ಷಾಂತರ ಜನರು ಆಗಮಿಸುವ ನಿಟ್ಟಿನಲ್ಲಿ ಸಂಚಾರಿ ಪೊಲೀಸರು ಸಂಚಾರ ಮಾರ್ಗ ಬದಲಾವಣೆಯ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.  ಮೊಟ್ಟ ಮೊದಲ ಬಾರಿಗೆ ಬೆಂಗಳೂರಲ್ಲಿ ಆಯೋಜಿಸಲಾದ ಕಂಬಳ (Kambala) ವೀಕ್ಷಣೆಗೆ ಬರುವವರ ಪ್ರವೇಶ ವಾಹನ ನಿಲುಗಡೆಗೆ ಪ್ರತ್ಯೇಕ ಸ್ಥಳ ವ್ಯವಸ್ಥೆ ಮಾಡಲಾಗಿದೆ. ಸಿಬಿಡಿ ಏರಿಯಾ, ಮೇಖ್ರಿ ಸರ್ಕಲ್​​ ಬಳಿಯಿಂದ ಬರುವ ವಾಹನಗಳಿಗೆ ಗೇಟ್ ನಂ.1 ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಹೆಬ್ಬಾಳ, ಮೇಖ್ರಿ ಸರ್ಕಲ್ ಅಂಡರ್ ಪಾಸ್, ಯಶವಂತಪುರ ಕಡೆಯಿಂದ ಬರುವ ವಾಹನಗಳಿಗೆ ಗೇಟ್ ನಂ.1 ರ ಮೂಲಕ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಕ್ಯಾಬ್​​ನಲ್ಲಿ ಬರುವವರು ಗೇಟ್ ನಂಬರ್ 2ರ ಮೂಲಕ ಪ್ರವೇಶಿಸಬೇಕು. ಗೇಟ್ ನಂಬರ್ 3ರ ಮೂಲಕ ಕ್ಯಾಬ್​​ಗಳು ನಿರ್ಗಮಿಸಬೇಕಾಗಿದೆ.

ಅರಮನೆ ರಸ್ತೆ, ಬಿಡಿಎ ಜಂಕ್ಷನ್​​ನಿಂದ ಚಕ್ರವರ್ತಿ ಲೇಔಟ್ ಸೇರಿದಂತೆ ವಸಂತನಗರ ಅಂಡರ್ ಪಾಸ್​​ನಿಂದ ಹಳೇ ಉದಯ ಟಿವಿ ಜಂಕ್ಷನ್​​ವರೆಗೆ ಎಂ.ವಿ ಜಯರಾಂ ರಸ್ತೆ ಬಳಸುವಂತೆ ಸೂಚಿಸಿದ್ದಾರೆ.

ಮೇಖ್ರಿ ವೃತ್ತದಿಂದ LRDE ಜಂಕ್ಷನ್​ವರೆಗೆ ಬಳ್ಳಾರಿ ರಸ್ತೆ ಬಳಸಬೇಕು. ಅರಮನೆ ರಸ್ತೆಯಲ್ಲಿ ಸಂಚರಿಸುವವರು ಜಯಮಹಲ್ ರಸ್ತೆ ಬಳಸಬೇಕು. ಪ್ಯಾಲೆಸ್ ರಸ್ತೆ, ಎಂ.ವಿ.ಜಯರಾಂ ರಸ್ತೆ, ಸಿ.ವಿ.ರಾಮನ್ ರಸ್ತೆ, ವಸಂತ ನಗರ ರಸ್ತೆ, ಜಯಮಹಲ್ ರಸ್ತೆ, ರಮಣ ಮಹರ್ಷಿ ರಸ್ತೆ, ನಂದಿ ದುರ್ಗ ರಸ್ತೆ, ಬಳ್ಳಾರಿ ರಸ್ತೆ, ಮೌಂಟ್ ಕಾರ್ಮಲ್ ರಸ್ತೆ ಬಳಿ ವಾಹನ ನಿಲುಗಡೆಗೆ ನಿರ್ಬಂಧಿಸಲಾಗಿದೆ ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

Loading

Leave a Reply

Your email address will not be published. Required fields are marked *