ನೀತಿ ಸಂಹಿತೆ ಉಲ್ಲಂಘಣೆ ಆರೋಪ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದೂರು

ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಮತ್ತು ಕ್ರಿಮಿನಲ್ ಮೊಕದ್ದಮೆಯನ್ನು (Criminal Prosecution) ಪ್ರಾರಂಭಿಸಲು ರಾಜಸ್ಥಾನದ ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡುವಂತೆ ಬಿಜೆಪಿ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಮತದಾನದ (Voting) ದಿನವಾದ ರಾಹುಲ್ ಗಾಂಧಿ ಎಕ್ಸ್ ಮಾಡಿದ್ದರು.

ಉಚಿತ ಚಿಕಿತ್ಸೆ, ಕಡಿಮೆ ದರದಲ್ಲಿ ಸಿಲಿಂಡರ್, ಇಂಗ್ಲಿಷ್ ಶಿಕ್ಷಣ, ಹಳೆ ಪಿಂಚಣಿ ವ್ಯವಸ್ಥೆ ಜಾರಿ ಸೇರಿ ಹಲವು ಯೋಜನೆಗಳಿಗಾಗಿ ಕಾಂಗ್ರೆಸ್‌ಗೆ ಮತದಾನ ಮಾಡುವಂತೆ ಮನವಿ ಮಾಡಿದ್ದರು. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ರಾಹುಲ್ ಗಾಂಧಿ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ (BJP)  ಕೇಂದ್ರ ಚುನಾವಣಾ ಆಯೋಗಕ್ಕೆ (Central Election Commission) ದೂರು ನೀಡಿದೆ. ರಾಹುಲ್ ಗಾಂಧಿ ಮಾಡಿದ ಪೋಸ್ಟ್ ಡಿಲಿಟ್ ಮಾಡಬೇಕು.

ಅವರ ಖಾತೆಯನ್ನು ಅಮಾನತು ಮಾಡಬೇಕು ಹಾಗೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಪ್ರಾರಂಭಿಸಲು ಬಿಜೆಪಿ ಆಗ್ರಹಿಸಿದೆ. ಈ ಹಿಂದೆ ರಾಜಸ್ಥಾನ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಭಾರತ ವಿಶ್ವಕಪ್ ಸೋಲಿಗೆ ಪ್ರಧಾನಿ ನರೇಂದ್ರ ಮೋದಿ ಕಾಲ್ಗುಣ ಕಾರಣ. ಅವರು ಅಪಶಕುನ ಎಂದು ಅವಹೇಳನಾಕಾರಿ ಹೇಳಿಕೆ ನೀಡಿದ್ದರು. ಇದರ ವಿರುದ್ಧವೂ ಬಿಜೆಪಿ ಆಯೋಗಕ್ಕೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿತ್ತು. ಬಿಜೆಪಿ ದೂರು ಹಿನ್ನೆಲೆ ರಾಗಾಗೆ ಆಯೋಗ ನೋಟಿಸ್ ನೀಡಿತ್ತು.

Loading

Leave a Reply

Your email address will not be published. Required fields are marked *