ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಕಾರು, ಬೈಕ್ ನಡುವೆ ಡಿಕ್ಕಿಯಾಗಿ, ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಯಲಹಂಕ ತಾಲೂಕಿನ ರಾಜಾನುಕುಂಟೆ ಕಾಕೋಳು ರಸ್ತೆಯ ಚಲ್ಲಹಳ್ಳಿ ಕಾರು-ಬೈಕ್ ನಡುವೆ ಡಿಕ್ಕಿಯಾಗಿದ್ದು, ಚಲ್ಲಹಳ್ಳಿ ಗ್ರಾಮದ ರಾಮಯ್ಯ (39) ನಾಗರಾಜ್ (42) ಮೃತ ದುರ್ದೈವಿಗಳು.
ಇನ್ನು ಅಪಘಾತದ ರಬಸಕ್ಕೆ ಬೈಕ್ ಮತ್ತು ಕಾರಿನ ಮುಂಬಾಗ ಜಖಂ ಆಗಿದ್ದು, ರಸ್ತೆಯಿಂದ ನೂರು ಮೀಟರ್ ದೂರದಲ್ಲಿ ಬೈಕ್ ಬಿದ್ದಿದೆ.