ಬೆಂಗಳೂರು:- ಸಂಜಯ್ ನಗರ ಠಾಣಾ ವ್ಯಾಪ್ತಿಯಲ್ಲಿ ಮನೆ ಮುಂದೆ ಕಾರು ಪಾರ್ಕಿಂಗ್ ಮಾಡಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಅನಾಮಿಕ ವ್ಯಕ್ತಿ ಯುವತಿಗೆ ಕೆಟ್ಟ ಪದಗಳಿಂದ ನಿಂದಿಸಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಯುವತಿಯ ಸ್ನೇಹಿತರು ಸಮಾಧಾನ ಮಾಡುವ ಪ್ರಯತ್ನಪಟ್ಟರೂ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು ಇದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಯುವತಿ ಸ್ನೇಹಿತನಿಂದ ಎಕ್ಸ್ ನಲ್ಲಿ ಕಮಿಷನರ್ ಗೆ ಟ್ಯಾಗ್ ಮಾಡಿ ಸಂಜಯ್ ನಗರ ಪೊಲೀಸರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪೊಲೀಸರಿಗೆ ವಿಡಿಯೋ ಸಮೇತ ದೂರು ಕೊಟ್ಟರು ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳದ ಬಗ್ಗೆ ಆರೋಪ ಮಾಡಲಾಗಿದೆ.