ಚಾಮರಾಜನಗರ:- ಜಿಲ್ಲೆಯ ಚಾಮರಾಜನಗರದಲ್ಲಿ ಅಪಘಾತದಲ್ಲಿ ಮೆದುಳು ನಿಷ್ಕ್ರೀಯವಾಗಿ ಸಾವಪ್ಪಿದ ಯುವಕ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಘಟನೆ ಜರುಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ವಾಸಿ ದರ್ಶನ್ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ ಎಂದು ಗುರುತಿಸಲಾಗಿದೆ.
ದರ್ಶನಗೆ ಅಪಘಾತವಾಗಿ ಮೆದುಳು ಪೆಟ್ಟಾಗಿತ್ತು. ಪೆಟ್ಟಾದ ಹಿನ್ನೆಲೆ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹನೂರು ಪಟ್ಟಣದ ನಿವಾಸಿಗಳಾದ ಶಶಿ ಮತ್ತು ಸುಶೀಲಾ ದಂಪತಿ ಪುತ್ರ ದರ್ಶನ್ ಎನ್ನಲಾಗಿದೆ. ರಸ್ತೆ ಅಪಘಾತವಾದ ಹಿನ್ನಲೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು ಎನ್ನಲಾಗಿದೆ.
ನಂತರ ಪೋಷಕರು ತಮ್ಮ ಪುತ್ರನ ಅಂಗಾಂಗ ದಾನ ಮಾಡಲು ಒಪ್ಪಿಗೆ ಸೂಚಿಸಿ ಮಾನವೀಯತೆ ಮೆರೆದಿದ್ದಾರೆ. ಈ ಮೂಲಕ ದರ್ಶನ್ ತನ್ನ ಸಾವಿನಲ್ಲಿ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದು ಇತರರಿಗೆ ಮಾದರಿಯಾಗಿದ್ದಾರೆ. ಮೈಸೂರಿನ ಅಪೋಲೋ ಆಸ್ಪತ್ರೆಗೆ ದರ್ಶನ್ ಹೃದಯ ಮತ್ತು ಹೃದಯದ ನಾಳ, ಶ್ವಾಸಕೋಸ ನಾಶಗಳು, ಪಿತ್ತಕೋಂಶ(ಲಿವರ್), ಮೂತ್ರಪಿಂಡ(ಕಿಡ್ನಿ), ಕಣ್ಣು, ದಾನ ಮಾಡಿದ್ದಾರೆ.