ಅಲ್ಪಸಂಖ್ಯಾತರ ಪರ ಹೇಳಿಕೆ ಹಿಂದೂಗಳ ಆಕ್ರೋಶಕ್ಕೆ ಅವಕಾಶ ಆಗುತ್ತದೆ: ಬಿಎಸ್ ಯಡಿಯೂರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿಯಾಗಿ ಅಲ್ಪಸಂಖ್ಯಾತರಿಗೆ ಹಣ ಕೊಡಲು ನಮ್ಮ ಅಭ್ಯಂತರ ಇಲ್ಲ. 10 ಸಾವಿರ ಕೋಟಿ ಕೊಡುತ್ತೇನೆ ಎಂದು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿರುವುದು ಶೋಭೆ ತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ತಿಳಿಸಿದರು.

ಶಿವಮೊಗ್ಗದಲ್ಲಿ (Shivamogga) ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅಲ್ಪಸಂಖ್ಯಾತರ ಪರ ಹೇಳಿಕೆ ಹಿಂದೂಗಳ ಆಕ್ರೋಶಕ್ಕೆ ಅವಕಾಶ ಆಗುತ್ತದೆ. ಈ ರೀತಿಯ ಮಾತುಗಳನ್ನು ಮುಖ್ಯಮಂತ್ರಿ ಅವರಿಂದ ನಿರೀಕ್ಷೆ ಮಾಡಿರಲಿಲ್ಲ. ಈಗಾಗಲೇ ಅವರ ಹೇಳಿಕೆಯನ್ನು ಮಠಾಧಿಪತಿಗಳು ಸೇರಿದಂತೆ ಎಲ್ಲರೂ ಖಂಡಿಸಿದ್ದಾರೆ. ಏನಾದರೂ ಮಾತನಾಡಬೇಕಾದರೆ ಎಚ್ಚರಿಕೆ ವಹಿಸಿ ಮಾತನಾಡಬೇಕು ಎಂಬುದು ನನ್ನ ಸಲಹೆ ಎಂದರು.

ಲೋಕಸಭೆ ಚುನಾವಣೆಯಲ್ಲಿ (Lok Sabha Election) ಮೋದಿ ಹೆಸರಿನಲ್ಲಿ ನೂರಕ್ಕೆ ನೂರು ಗೆಲ್ಲುವುದರಲ್ಲಿ ಯಾವುದೇ ಅನುಮಾನ ಬೇಡ. ಓಲೈಕೆ ರಾಜಕಾರಣದಲ್ಲಿ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದರೆ ಅದು ಸಾಧ್ಯವಿಲ್ಲ. ಬಿಜೆಪಿ (BJP) ಪರವಾದ, ಮೋದಿ ಪರವಾದ ವಾತಾವರಣದಿಂದ ನಾವು ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲಲ್ಲು ಪ್ರಯತ್ನಿಸುತ್ತಿದ್ದೇವೆ. ಇದರಲ್ಲಿ ನೂರಕ್ಕೆ ನೂರರಷ್ಟು ಯಶಸ್ವಿಯಾಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Loading

Leave a Reply

Your email address will not be published. Required fields are marked *