ಅಲಹಾಬಾದ್: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಮಾಡಲು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ASI) ಅನುಮತಿ ನೀಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದಾಗ್ಯೂ, ರಚನೆಗೆ ಯಾವುದೇ ಹಾನಿಯಾಗಬಾರದು ಎಂದು ನ್ಯಾಯಾಲಯ ಹೇಳಿದೆ.
ಜ್ಞಾನವಾಪಿ ಸಂಕೀರ್ಣದಲ್ಲಿ ನಡೆದ ಸಮೀಕ್ಷೆಯ ವೇಳೆ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಪರೀಕ್ಷೆ ಮತ್ತು ವೈಜ್ಞಾನಿಕ ಸಮೀಕ್ಷೆಗಾಗಿ ಸಲ್ಲಿಸಲಾದ ಅರ್ಜಿಯನ್ನ ಅಲಹಾಬಾದ್ ಹೈಕೋರ್ಟ್ ಸ್ವೀಕರಿಸಿದೆ ಮತ್ತು ಶಿವಲಿಂಗಕ್ಕೆ ಹಾನಿಯಾಗದಂತೆ ಕಾರ್ಬನ್ ಡೇಟಿಂಗ್ ಪರೀಕ್ಷೆಯನ್ನ ನಡೆಸುವಂತೆ ಎಎಸ್‌ಐಗೆ ಆದೇಶಿಸಿದೆ.
ಅಂದ್ಹಾಗೆ, ವಾರಣಾಸಿಯ ಅಧೀನ ನ್ಯಾಯಾಲಯವು ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ಕೋರ್ಟ್‌ನ ಆದೇಶದ ಕಾರಣ ಕಾರ್ಬನ್ ಡೇಟಿಂಗ್ ಪರೀಕ್ಷೆಯನ್ನ ನಡೆಸಲು ನಿರಾಕರಿಸಿತು, ಇಂದು ಇದನ್ನ ಪ್ರಶ್ನಿಸಲಾಗಿದ್ದು, ವಾರಣಾಸಿ ನ್ಯಾಯಾಲಯದ ಆದೇಶವನ್ನ ಹೈಕೋರ್ಟ್ ರದ್ದುಗೊಳಿಸಿದೆ. ಲಕ್ಷ್ಮೀದೇವಿ ಮತ್ತು ಇತರರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮಿಶ್ರಾ ಅವರು ಈ ಆದೇಶ ನೀಡಿದ್ದಾರೆ.