ಬೆಂಗಳೂರು:- ನಮ್ಮ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುವ ಮೊದಲು ಬಿಜೆಪಿಯ ಶಾಸಕರೇ ಆಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಿನ್ನೆ ಸದನದ ಒಳಗೆ ಮತ್ತು ಹೊರಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷರಾದ ಅವರ ಮಗ ಬಿ.ವೈ.ವಿಜಯೇಂದ್ರ, ಇನ್ನೊಬ್ಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್ .ಅಶೋಕ್ ಅವರ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಬಿಜೆಪಿ ನಾಯಕರು ಈ ಪ್ರತಿಭಟನಾ ಸಭೆಯಲ್ಲಿ ಉತ್ತರಿಸಲಿ” ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಬಿ.ಎಸ್. ಯಡಿಯೂರಪ್ಪನವರು ಹೈಕಮಾಂಡ್ಗೆ ಎರಡು ಸಾವಿರ ಕೋಟಿ ರೂಪಾಯಿ ಕಾಣಿಕೆ ನೀಡಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಹಿಂದೆ ಆರೋಪಿಸಿದ್ದ ಬಸವನಗೌಡ ಪಾಟೀಲ್ ಯತ್ನಾಳ್, ನಿನ್ನೆ ಹೊಸ ಬಾಂಬು ಸಿಡಿಸಿದ್ದಾರೆ. ಕೇಂದ್ರದ ಬಿಜೆಪಿ ನಾಯಕರನ್ನು ಯಡಿಯೂರಪ್ಪ ಬ್ಲಾಕ್ ಮೇಲ್ ಮಾಡಿ ತಮ್ಮ ಮಗನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಏನಿದು ಬ್ಲಾಕ್ ಮೇಲ್?. ಈ ಬಗ್ಗೆ ಯಡಿಯೂರಪ್ಪ ಇಂದಿನ ಸಾರ್ವಜನಿಕ ಸಭೆಯಲ್ಲಿ ವಿವರ ನೀಡಲಿ” ಎಂದು ಒತ್ತಾಯಿಸಿದ್ದಾರೆ.