ಭದ್ರತಾ ಲೋಪದ ಹಿಂದೆ ಕಾಂಗ್ರೆಸ್‌ ಪಕ್ಷದ ಟೂಲ್‌ ಕಿಟ್‌ ರಾಜಕಾರಣ: ಸಿಟಿ ರವಿ

ಚಿಕ್ಕಮಗಳೂರು:- ಭದ್ರತಾ ಲೋಪ ಪ್ರಕರಣದ ಹಿಂದೆ ಕಾಂಗ್ರೆಸ್ ಪಕ್ಷದ ಟೂಲ್ ಕಿಟ್ ರಾಜಕಾರಣ ಇದ್ದಂತೆ ಕಾಣುತ್ತದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದರು. ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಅದರ ಹಿನ್ನೆಲೆ ಅರ್ಥವಾಗುವ ಮುಂಚೆಯೇ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಾರೆ.

ವಿಧಾನಸಭೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಪ್ರಶ್ನೆ ಮಾಡುತ್ತಾರೆ. ತನಿಖೆ ಮಾಡಿ ಎಂದು ಒತ್ತಾಯಿಸುವುದು ಸರಿ ಆದರೆ. ಅದನ್ನೂ ಮೀರಿ ಸಂಸದ ಪ್ರತಾಪ್ ಸಿಂಹ ಅವರನ್ನು ಗುರಿ ಮಾಡಿದರು ಎಂದರು.

ಇತ್ತೀಚೆಗೆ ಕಾಂಗ್ರೆಸ್ ಸಂಸದನೊಬ್ಬನ ಮನೆಯಲ್ಲಿ ಐಟಿ ದಾಳಿ ವೇಳೆ ದಾಖಲೆ ಪ್ರಮಾಣದ ಹಣ ಪತ್ತೆಯಾಗಿದೆ. 500 ಕೋಟಿ ರು.ಗೂ ಹೆಚ್ಚಿನ ಅಕ್ರಮ ಆಸ್ತಿ, 350 ಕೋಟಿ ರು.ಗಳಿಗಿಂತ ಹೆಚ್ಚಿನ ನಗದು ಪತ್ತೆಯಾಗಿತ್ತು. ಇದೇ ವೇಳೆ 5 ರಾಜ್ಯಗಳ ಚುನಾವಣೆ ಪೈಕಿ 4 ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿತು. ಇವರೆಡರ ವಿಷಯಾಂತರ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಸಂಸತ್‌ನ ಭದ್ರತಾ ಲೋಪದ ಹೆಸರಲ್ಲಿ ಟೂಲ್ ಕಿಟ್ ರಾಜಕಾರಣ ಮಾಡಿರುವ ಅನುಮಾನ ಕಾಡುತ್ತಿದೆ ಎಂದರು.

Loading

Leave a Reply

Your email address will not be published. Required fields are marked *