ದೇವನಹಳ್ಳಿ : ಏರ್ ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 9 ಕಾರುಗಳು ಜಖಂಗೊಂಡಿವೆ. ದೇವನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 7 ಸಾದಹಳ್ಳಿಗೇಟ್ ಬಳಿ ಘಟನೆ ನಡೆದಿದ್ದು,
ಅಪಘಾತದಲ್ಲಿ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಕೊಂಡಿವೆ, ಅಪಘಾತದಲ್ಲಿ 9 ಕಾರುಗಳು ಜಖಂಗೊಂಡಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದಿಂದ ಏರ್ ಪೋರ್ಟ್ ರಸ್ತೆಯಲ್ಲಿ ಟ್ರಾಫಿಕ್ ಜ್ಯಾಮ್ ಉಂಟಾಗಿದ್ದು, ಸ್ಥಳಕ್ಕೆ ಆಗಮಿಸಿದ ಚಿಕ್ಕಜಾಲ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.