ಚಿಕ್ಕಮಗಳೂರು: ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಂತ ಸಿ.ಟಿ ರವಿ ಅವರು ಸೋಲು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಗೆಲುವು ಸಾಧಿಸಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದಲ್ಲಿ ಆರಂಭದಿಂದಲೂ ಇಂದು ನಡೆದಂತ ಮತಎಣಿಕೆಯ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಸ್ಪರ್ಧೆ ಉಂಟಾಗಿತ್ತು. ಒಮ್ಮೆ ಬಿಜೆಪಿಯ ಸಿ.ಟಿ ರವಿ ಮುನ್ನಡೆ ಸಾಧಿಸಿದ್ರೇ, ಮಗದೊಮ್ಮೆ ಹಿನ್ನಡೆಯನ್ನು ಅನುಭವಿಸಿದ್ದರು. ರಾಜಕೀಯ ಹಾವು ಏಣೆ ಆಟದಲ್ಲಿ ಇದೀಗ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಭರ್ಜರಿ ಗೆಲುವು ಕಂಡಿದ್ದಾರೆ. ಸಿ.ಟಿ ರವಿ ಸೋಲು ಕಂಡಿದ್ದಾರೆ.