ಹುಬ್ಬಳ್ಳಿ: ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ದಿನದಿಂದ ದಿನಕ್ಕೆ ಹೆಚ್ಚಾಗುತಿದೆ. ಪಕ್ಷದ ನಾಯಕರ ವಿರುದ್ಧವೇ ಬಹಿರಂಗವಾಗಿ ಹಿಗ್ಗಾಮುಗ್ಗ ಮಾತನಾಡುವ ಮೂವರು ನಾಯಕರು ನವದೆಹಲಿಗೆ ಹೋಗಿದ್ದಾರೆ. ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಒಂದೇ ವಿಮಾನದಲ್ಲಿ ಪ್ರಯಾಣ ಬೆಳಸಿದರು.
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜೇಯಂದ್ರ ಹಾಗೂ ಭಾರತೀಯ ಜನತಾ ಪಕ್ಷದ ವಿರೋಧ ಪಕ್ಷದ ನಾಯಕರಾಗಿ ಆರ್ ಅಶೋಕ ಅವರು ನೇಮಕ ಮಾಡುತಿದ್ದಂತೆ ಬಸನಗೌಡ ಪಾಟೀಲ್ ಯತ್ನಾಳ ಬಹಿರಂಗವಾಗಿ ಟೀಕೆ ಮಾಡಲಾರಂಬಿಸಿದರು .
ಆದ್ದರಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರಿಗೆ ಇನ್ನು ಮುಂದೆ ಬಹಿರಂಗವಾಗಿ ಮಾತನಾಡಬಾರದು ಎಂಬ ತಾಕೀತು ಮಾಡುವುದು ಯಾವುದೇ ಕಾರಣಕ್ಕೂ ಪಕ್ಷದ ಆಂತರಿಕ ವಿಚಾರ ಬಹಿರಂಗವಾಗಿ ಮಾತನಾಡಿರುವ ವಿಚಾರವನ್ನ ಚರ್ಚೆ ಮಾಡಬಾರದು ಎಂಬ ತಾಕೀತು ಮಾಡುವ ಸಾಧ್ಯತೆ ಇದೆ.
ಪಕ್ಷದ ವರಿಷ್ಠರಿಂದ ಯತ್ನಾಳ ಗೆ ಬುಲಾವ್ ಮೇರೆಗೆ ದೆಹಲಿಗೆ ತೆರಳಿದ್ದು ಇನ್ನು ಇದೇ ಸಂದರ್ಭದಲ್ಲಿ
ಲೋಕಸಭಾ ಚುನಾವಣೆಯಲ್ಲಿ ಟಿಕೇಟ್ ತಪ್ಪುವ ಭೀತಿ ವಿಚಾರವಾಗಿ ಸಹ ಸಂಗಣ್ಣ ಕರಡಿ, ಅನಂತಕುಮಾರ ಹೆಗಡೆ ಸಹ ದೆಹಲಿಗೆ ಪಯಣ ಮಾಡಿದ್ದಾರೆ ಎನ್ನಲಾಗಿದೆ.
ನಾಳೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಗೃಹ ಸಚಿವ ಅಮಿತಾ ಶಾ ಭೇಟಿಯಾಗಲಿರುವ ನಾಯಕರು ರಾಜ್ಯದ ಭಾರತೀಯ ಜನತಾ ಪಕ್ಷದ ವಿದ್ಯಮಾನಗಳ ಬಗ್ಗೆ ಸಹ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.