ಬೆಂಗಳೂರು :- ಇಂದಿನಿಂದ ಎಮ್ಮೆ ಹಾಲು ರಾಜ್ಯದ ಮಾರುಕಟ್ಟೆಯನ್ನು ಪ್ರವೇಶ ಮಾಡುತ್ತಿದೆ. ಎಮ್ಮೆ ಹಾಲಿಗೆ ಗ್ರಾಹಕರಿಂದ ಭಾರಿ ಬೇಡಿಕೆ ವ್ಯಕ್ತವಾಗಿರುವ ಕಾರಣದಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಹಾಗಂತ ಕೆಎಂಎಫ್ ವತಿಯಿಂದ ಎಮ್ಮೆ ಹಾಲನ್ನು ಪೂರೈಕೆ ಮಾಡುತ್ತಿರುವುದು ಇದೇ ಮೊದಲಲ್ಲ.
ಕೆಲವು ವರ್ಷಗಳ ಹಿಂದೆ ಸಹ ನಂದಿನಿ ಎಮ್ಮೆ ಹಾಲನ್ನು ಮಾರುಕಟ್ಟೆಗೆ ಬಿಡಲಾಗಿತ್ತು. ಆದರೆ, ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಕೈಬಿಡಲಾಗಿತ್ತು. ಆ ಸಮಯದಲ್ಲಿ ಸುಮಾರು ಅಂದು 5000 ಲೀಟರ್ ಹಾಲನ್ನು ಕೆಎಂಎಫ್ ಮಾರಾಟ ಮಾಡುತ್ತಿತ್ತು. ಆದರೆ, ಈಗ ಮತ್ತೆ ಹೊಸ ರೂಪದಲ್ಲಿ ಬರುತ್ತಿದೆ.