ನವದೆಹಲಿ : 36,000 ಪ್ರಾಥಮಿಕ ಶಾಲಾ ಶಿಕ್ಷಕರನ್ನ ಅಕ್ರಮವಾಗಿ ನೇಮಿಸಲಾಗಿದೆ ಎಂದು ಆರೋಪಕ್ಕೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ್ದು, ನೇಮಕಾತಿಯನ್ನ ವಜಾಗೊಳಿಸಿದೆ.
ಈ ಪ್ರಕರಣದಲ್ಲಿ ಕಲ್ಕತ್ತಾ ಹೈಕೋರ್ಟ್ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ಕ್ರಮ ಆದೇಶ ಹೊರಡಿಸಿದೆ.
ಕಲ್ಕತ್ತಾ ಹೈಕೋರ್ಟ್ ಸಾಕಷ್ಟು ಅನುಭವವಿಲ್ಲದವರನ್ನ ಶಿಕ್ಷಕರಾಗಿ ನೇಮಿಸಿದ್ದಾರೆ ಎಂಬ ಕಾರಣಕ್ಕಾಗಿ ವಜಾಗೊಳಿಸಿದೆ. ಇನ್ನು ಖಾಲಿ ಹುದ್ದೆಗಳನ್ನು ಹೊಸದಾಗಿ ನೇಮಕಗೊಂಡ ವ್ಯಕ್ತಿಗಳೊಂದಿಗೆ ಭರ್ತಿ ಮಾಡುವಂತೆ ಪಶ್ಚಿಮ ಬಂಗಾಳ ಪ್ರಾಥಮಿಕ ಶಿಕ್ಷಣ ಮಂಡಳಿಗೆ ನಿರ್ದೇಶನ ನೀಡಿದೆ.
ಇನ್ನು ಕಲ್ಕತ್ತಾ ಹೈಕೋರ್ಟ್ನ ನ್ಯಾಯಮೂರ್ತಿ ಅಭಿಜಿತ್ ಗಂಗೂಲಿ ಪೀಠವು ಮುಂದಿನ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನ ಪೂರ್ಣಗೊಳಿಸುವಂತೆ ಮಂಡಳಿಗೆ ನಿರ್ದೇಶನ ನೀಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.