ಆಭರಣ ಪ್ರಿಯರಿಗೆ ಸಿಹಿ ಸುದ್ದಿ – ವಾರಾಂತ್ಯದಲ್ಲಿ ಇಳಿಕೆ ಕಂಡ ಚಿನ್ನದ ದರ

ತತ ಏರಿಕೆಯ ಬಳಿಕ ವಾರಾಂತ್ಯದಲ್ಲಿ ಚಿನ್ನದ ದರ ಇಳಿಕೆ ಕಂಡಿದ್ದು, ಮೂರು ದಿನಗಳಿಂದ ಬೆಳ್ಳಿ ಬೆಲೆ ಸ್ಥಿರವಾಗಿದೆ.

ಇಂದು 1 ಗ್ರಾಂ ಚಿನ್ನದ ಬೆಲೆ 5,855 ರೂ. ಇದೆ. ನಿನ್ನೆ 5,890 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 35 ರೂ ಕಡಿಮೆಯಾಗಿದೆ. 8 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 46,840 ರೂ.

ನೀಡಬೇಕು. ನಿನ್ನೆ 47,120 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 280 ರೂ. ಇಳಿಕೆಯಾಗಿದೆ. ಇಂದಿನ 10 ಗ್ರಾಂ ಚಿನ್ನದ ಬೆಲೆ 58,550 ಆಗಿದ್ದರೆ, ನಿನ್ನೆ 58,900 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 350 ರೂ. ಹೆಚ್ಚಾಗಿದೆ. 100 ಗ್ರಾಂ ಚಿನ್ನದ ಬೆಲೆ 5,85,500 ರೂ. ಇದೆ. ನಿನ್ನೆ 5,89,000 ರೂ. ಇದ್ದು 3,500 ಕಡಿಮೆಯಾಗಿದೆ.

1 ಗ್ರಾಂ 24 ಕ್ಯಾರೆಟ್‌ ಚಿನ್ನಕ್ಕೆ ಇಂದು 6,387 ರೂ ಇದೆ. ನಿನ್ನೆ 6,425 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ ಇಂದು 38 ರೂ ಕಡಿಮೆಯಾಗಿದೆ. 8 ಗ್ರಾಂ ಚಿನ್ನಕ್ಕೆ ಇಂದು 51,096 ರೂ ನೀಡಬೇಕು. ನಿನ್ನೆ 51,400 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ ಇಂದು 304 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 63,870 ರೂ. ಕೊಡಬೇಕು. ನಿನ್ನೆ 64,250 ರೂ. ಇತ್ತು, ನಿನ್ನೆಗಿಂತ ಇಂದು 380 ರೂ. ಕಡಿಮೆಯಾಗಿದೆ. 100 ಗ್ರಾಂ ಚಿನ್ನದ ದರ 6,38,700 ರೂ ಇದೆ. ನಿನ್ನೆ 6,42,500 ರೂ. ಇದೆ. ಈ ದರಕ್ಕೆ ಹೋಲಿಸಿದರೆ 3,800 ರೂ. ಹೆಚ್ಚಾಗಿದೆ.

ಬೆಂಗಳೂರು, ಮಂಗಳೂರು, ಮೈಸೂರು, ದಾವಣಗೆರೆ, ಬಳ್ಳಾರಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು 22 ಕ್ಯಾರೆಟ್‌ ಚಿನ್ನದ ಬೆಲೆ 10 ಗ್ರಾಂ ಗೆ 58,550 ರೂ ಇದ್ದರೆ, 24 ಕ್ಯಾರೆಟ್‌ಗೆ 63,870 ರೂ. ಇದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇತ್ಯಾದಿ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

Loading

Leave a Reply

Your email address will not be published. Required fields are marked *