ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪ್ರಚಂಡ ಗೆಲುವು ಸಾಧಿಸಿದ್ದು, ಈ ನಡುವೆ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿಎಂ ಆಗಲಿ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಈಗಾಗಲೇ ಮುಖ್ಯಮಂತ್ರಿ ಆಗಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕಾಗಿರುವವರು. ಯಾರು ಸಿಎಂ ಎಂದು ಅವರ ಪಕ್ಷ ನಿರ್ಧಾರ ಕೈಗೊಳ್ಳುತ್ತದೆ ಎಂದು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿದ್ದಾರೆ.
ನಾನು ಈಗ ನಿರುದ್ಯೋಗಿ ಆಗಿದ್ದೇನೆ. ನಾನು ಸೋಲನ್ನು ಒಪ್ಪಿಕೊಂಡಿದ್ದೇನೆ. ಯಾವುದೇ ಕಾರಣಕ್ಕೂ ರಾಜಕೀಯ ನಿವೃತ್ತಿ ಪಡೆಯಲ್ಲ.ನಾನು ಸಾಯುವ ತನಕ ಸಕ್ರಿಯ ರಾಜಕಾರಣದಲ್ಲೇ ಇರುತ್ತೇನೆ ಎಂದರು.