ಬೆಳಗಾವಿಯಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ನಾಡದ್ರೋಹಿಗಳು

ಬೆಳಗಾವಿ ಬೆಳಗಾವಿಯಲ್ಲಿ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ. ಹೌದು ಹೊಸ ವರ್ಷದ ಸಂದರ್ಭದಲ್ಲೇ ಗಡಿಜಿಲ್ಲೆ ಬೆಳಗಾವಿಯಲ್ಲಿ ರಾತ್ರೋರಾತ್ರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ದರ್ಪ ಮೆರೆದಿದ್ದಾರೆ. ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ಕಟ್ಟಿದ್ದ ನಾಡಧ್ವಜಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

 ಪುಂಡರ ಕೃತ್ಯಕ್ಕೆ ಕನ್ನಡ ಪರ ಹೋರಾಟಗಾರರು ಆಕ್ರೋಶ ಹೊರ ಹಾಕಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಹೋರಾಟಗಾರರು ಮನವಿ ಮಾಡಿದ್ದಾರೆ. ಇನ್ನು ಎರಡು ವರ್ಷದ ಹಿಂದೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಹಲಸಿಯಲ್ಲಿ ಕನ್ನಡ ಬಾವುಟ ಸುಟ್ಟು ಜಗಜ್ಯೋತಿ ಬಸವೇಶ್ವರರ ಚಿತ್ರಕ್ಕೆ ಸಗಣಿ ಮೆತ್ತಿದ್ದ ಘಟನೆ ನಡೆದಿತ್ತು.

Loading

Leave a Reply

Your email address will not be published. Required fields are marked *