ಬೆಂಗಳೂರು: ಯುವಕನೋರ್ವ ಹೊಸ ವರ್ಷಕ್ಕೆ ಕಾಲಿಡುತ್ತಲೇ ತನ್ನ ಜೀವನದ ಅಂತ್ಯ ಮುಗಿಸಿದ್ದಾನೆ. ಹೌದು ಶನಿವಾರ ತಡರಾತ್ರಿ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹನುಮಂತ ನಗರದ 80 ಅಡಿ ರಸ್ತೆಯಲ್ಲಿ ನಡೆದಿದೆ.
ವಿಜಯ್ (21) ಹತ್ಯೆಯಾದ ಯುವಕನಾಗಿದ್ದು, ತಡರಾತ್ರಿ ಒಂದು ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಯುವಕನನ್ನು ಹತ್ಯೆಗೈದಿದ್ದಾರೆ. ಈ ಕುರಿತು ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ ನಡೆದು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಹನುಮಂತ ನಗರದ ಶ್ರೀನಿವಾಸ ನಗರ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಆಟೋದಲ್ಲಿ ಬಂದ ದುಷ್ಕರ್ಮಿಗಳು ಯುವಕನ ಮೇಲೆ ಅಟ್ಯಾಕ್ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.