ಬೆಂಗಳೂರು: ರಾಜ್ಯ ಸರ್ಕಾರವು ಕೇಂದ್ರಕ್ಕೆ ಹಲವು ಬಾರಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದೆ. ಆದರೂ ಪರಿಹಾರ ಸಿಕ್ಕಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಕೇಂದ್ರದ ಬರ ಅಧ್ಯಯನ ತಂಡವು ರಾಜ್ಯಕ್ಕೆ ಬಂದು ಹೋಗಿ ತಿಂಗಳುಗಳು ಕಳೆದಿವೆ.
ಮುಖ್ಯಮಂತ್ರಿಗಳೇ ಸ್ವತಃ ಪ್ರಧಾನಿ ಹಾಗು ಗೃಹ ಸಚಿವರನ್ನು ಭೇಟಿ ಮಾಡಿ ಬರ ಪರಿಹಾರಕ್ಕೆ ಮನವಿ ಸಲ್ಲಿಸಿದ್ದಾರೆ, ನಮ್ಮ ಅನೇಕ ಸಚಿವರುಗಳು ಕೇಂದ್ರ ಕೃಷಿ ಮಂತ್ರಿಗಳನ್ನು, ಹಣಕಾಸು ಮಂತ್ರಿಗಳನ್ನು ಭೇಟಿ ಮಾಡಿ ಹಲವು ಬಾರಿ ಬರ ಪರಿಹಾರ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಆದರೆ ಇದುವರೆಗೂ ಕೇಂದ್ರ ಸರ್ಕಾರವು ರಾಜ್ಯದ ಮನವಿಗೆ ಸ್ಪಂದಿಸಿಲ್ಲ ಎಂದು ಆರೋಪಿಸಿದ್ದಾರೆ.