ಕಾಣದ ಕೈಗಳು ಸಿಎಂ ಸಿದ್ದರಾಮಯ್ಯರನ್ನೂ ದಿಕ್ಕು ತಪ್ಪಿಸುತ್ತಿವೆ: ಆರ್.ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರೇ, ಆ ಪ್ರಭು ಶ್ರೀರಾಮನು ನಿಮ್ಮನ್ನ ಎಂದಿಗೂ ಕ್ಷಮಿಸಲಾರ ಎಂದು ರಾಜ್ಯಾಧ್ಯಕ್ಷ ಆರ್.ಅಶೋಕ್ ಟ್ವೀಟ್‍ನಲ್ಲಿ ಕಿಡಿಕಾರಿದ್ದಾರೆ. ಕರಸೇವಕ ಶ್ರೀಕಾಂತ್ ಪೂಜಾರಿ ಅವರ ಮೇಲೆ ಇದ್ದ 16 ಪ್ರಕರಣಗಳಲ್ಲಿ 15 ಪ್ರಕರಣಗಳು ಈಗಾಗಲೇ ತಾರ್ಕಿಕ ಅಂತ್ಯಕಂಡಿವೆ. ಬಾಕಿ ಇರುವ ಒಂದು ಪ್ರಕರಣ ಸಹ 1992ರಲ್ಲಿ ಅವರು ನಾಪತ್ತೆಯಾಗಿದ್ದರು ಎಂಬ ಕಾರಣಕ್ಕೆ ದಾಖಲಾಗಿತ್ತು.

ಈಗ ಉಳಿದಿರುವುದು ಎರಡು ಸಾಧ್ಯತೆಗಳು ಮಾತ್ರ, ಒಂದು ತಮಗೆ ಆಡಳಿತದ ಮೇಲೆ ಸಂಪೂರ್ಣ ನಿಯಂತ್ರಣ ಕೈತಪ್ಪಿ, ಕಾಣದ ಕೈಗಳು ತಮ್ಮನ್ನು ದಿಕ್ಕು ತಪ್ಪಿಸುತ್ತಿವೆ. ಎರಡನೆಯದಾಗಿ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಕೆಣಕಲು ಉದ್ದೇಶಪೂರ್ವಕವಾಗಿ ಈ ಪ್ರಕರಣಕ್ಕೆ ಮರುಜೀವ ನೀಡಿದ್ದೀರಿ. ಇವೆರಡರಲ್ಲಿ ಯಾವುದು ಸತ್ಯವಾದರೂ ತಾವು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದೀರಿ ಎಂದು ಅವರು ಕಿಡಿಕಾರಿದ್ದಾರೆ

Loading

Leave a Reply

Your email address will not be published. Required fields are marked *