100 ಕೋಟಿ ಕ್ಲಬ್ ಸೇರಿದ ದರ್ಶನ್ ನಟನೆಯ ಕಾಟೇರ ಸಿನಿಮಾ

ರ್ಶನ್ ನಟನೆಯ ಕಾಟೇರ ಸಿನಿಮಾ ರಿಲೀಸ್ ಆದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಕುರಿತಂತೆ ದರ್ಶನ್ ಅಭಿಮಾನಿಗಳು ಪೋಸ್ಟ್ ಮಾಡಿದ್ದು, ‘ನಮ್ಮ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾದ, ಮತ್ತು ಕರುನಾಡೆ ಮೆಚ್ಚಿದ ನಮ್ಮ ಕಾಟೇರ ಕೇವಲ ಒಂದು ವಾರದಲ್ಲಿ, 52 ಲಕ್ಷಕ್ಕೂ ಅಧಿಕ ಟಿಕೆಟ್ಸ್ ಸೋಲ್ಡ್ ಔಟ್ ಆಗಿ, 104 ಕೋಟಿಗೂ ಅಧಿಕ ಹಣವನ್ನುಗಳಿಸಿ ಎಲ್ಲಾ ದಾಖಲೆಗಳನ್ನು ಮುರಿದು. ಹೊಸ ದಾಖಲೆಯನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ರಾಜ್ಯದಲ್ಲಿ ಕಾಟೇರ ಹವಾ ಜೋರಾಗಿದೆ. ಕರ್ನಾಟಕದಲ್ಲೇ ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ರೂಪಾಯಿ ಹಣ ಹರಿದು ಬರುತ್ತಿದೆ. ಜೊತೆಗೆ ನೆರೆಯ ರಾಜ್ಯದಲ್ಲೂ ಕಾಟೇರ ರಿಲೀಸ್ ಆಗಿದ್ದು, ಅಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗೋವಾ, ಆಂಧ್ರಪ್ರದೇಶ, ತಮಿಳು ನಾಡಿನಲ್ಲೂ ಕಾಟೇರ ಬಿಡುಗಡೆ ಆಗಿದ್ದು, ಅಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಥಿಯೇಟರ್ ಆಗಮಿಸಿದ್ದಾರೆ. ಸಿನಿಮಾಗೆ ಅತ್ಯುತ್ತಮ ರೆಸ್ಪಾನ್ಸ್ ಬಂದಿರುವ ಹಿನ್ನೆಲೆಯಲ್ಲಿ ವಿದೇಶದಲ್ಲೂ ಚಿತ್ರವನ್ನು ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿತ್ತು. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗಿತ್ತು. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ (Kaatera Cinema) ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಜೋರಾಗಿದೆ. ಮೊನ್ನೆಯಿಂದ ಸಿನಿಮಾ ಥಿಯೇಟರ್, ಮಾಲ್‌ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು (Darshan Fans) ದರ್ಶನ್‌ ಕಟೌಟ್‌ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್‌ ಡಿಬಾಸ್‌ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ.

Loading

Leave a Reply

Your email address will not be published. Required fields are marked *