ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸದ್ಯ ಸಿಎಂ ಆಯ್ಕೆ ವಿಚಾರ ಬಹಳ ಕುತೂಹಲ ಕೆರಳಿಸಿದೆ. ಒಂದು ಕಡೆ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದರೆ, ಇನ್ನೊಂದು ಕಡೆ ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು, ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ.
ಇದರ ನಡುವೆ ಸಿದ್ದರಾಮಯ್ಯ ಅಭಿಮಾನಿಯೋರ್ವ ಸಿದ್ದರಾಮಯ್ಯರೇ ಸಿಎಂ ಆಗಬೇಕೆಂದು ಹಚ್ಚೆ ಹಾಕಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಬೆಂಬಲಿಗನೋರ್ವ ಸಿದ್ದರಾಮಯ್ಯ ಸಿಎಂ ಎಂದು ಎದೆ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಸಿದ್ದರಾಮಯ್ಯ ಅಭಿಮಾನಿಗಳು ಪಟ್ಟು ಹಿಡಿದಿದ್ದು, ಸಿದ್ದರಾಮಯ್ಯ ಸರ್ಕಾರಿ ನಿವಾಸದತ್ತ ಆಗಮಿಸುತ್ತಿದ್ದಾರೆ. ಸಿದ್ದು ನಿವಾಸದಲ್ಲಿ ಅಭಿಮಾನಿಗಳು ಜಮಾಯಿಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನೊಂದೆಡೆ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ.