ಬೆಂಗಳೂರು : ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಕೆಲವೇ ಗಂಟೆಗಳ ಬಳಿಕ ಬಿಜೆಪಿ ಕಾರ್ಯಕರ್ತರೊಬ್ಬರ ಹತ್ಯೆಯಾಗಿದೆ. ಸರ್ಕಾರ ರಚಿಸುವ ಮೊದಲೇ ಬಿಜೆಪಿ ಕಾರ್ಯಕರ್ತರ ಹತ್ಯೆಯ ಗ್ಯಾರಂಟಿ ಈಡೇರಿಸಿದ್ದಾರೆ ಎಂದು ಅಶ್ವಥ್ ನಾರಾಯಣ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಸರ್ಕಾರ ರಚಿಸುವ ಮೊದಲೇ ಬಿಜೆಪಿ ಕಾರ್ಯಕರ್ತರ ಹತ್ಯೆಯ ಗ್ಯಾರಂಟಿಯನ್ನು ಈಡೇರಿಸಿದ ಕಾಂಗ್ರೆಸ್ಸಿಗರು ದ್ವೇಷದ ಹಾಗೂ ದರ್ಪದ ರಾಜಕಾರಣವನ್ನು ಅವರ ಎಂದಿನ ಚಾಳಿಯಂತೆ ಮುಂದುವರೆಸಿದ್ದಾರೆ. ಹೊಸಕೋಟೆಯ ನಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿ, ಕೊಲೆ ಮಾಡಿರುವುದು ಖಂಡನೀಯ. ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.