ಬೆಂಗಳೂರು: ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಅವರ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಅವರ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರು ತ್ರಿಬ್ಬಲ್ ತಲಾಕ್ ನಿಷೇಧ ಜಾರಿಗೆ ತಂದಿದ್ದಾರೆ. ಆದರೆ ದುಷ್ಕøತ್ಯಗಳಲ್ಲಿ ಭಾಗಿಯಾದವರನ್ನು ರಕ್ಷಿಸುವುದು ಅಕ್ಷಮ್ಯ ಅಪರಾಧ ಎಂದರು.
ಕಾಂಗ್ರೆಸ್‍ಗೆ ತಾವು ಅಲ್ಪಸಂಖ್ಯಾತರ ಮತಗಳಿಂದಲೇ ಅಧಿಕಾರಕ್ಕೆ ಬಂದಿದ್ದೇವೆ ಎಂಬ ಭಾವನೆ ಇದೆ. ಇದಕ್ಕಾಗಿ ರೈತರೂ ಸೇರಿದಂತೆ ಎಲ್ಲಾ ವರ್ಗಗಳನ್ನೂ ಕಡೆಗಣಿಸುತ್ತಿದೆ. ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೀಡುತ್ತೇವೆ ಎನ್ನುವುದರೊಂದಿಗೆ ಡಿಜೆ ಹಳ್ಳಿ/ಕೆಜೆ ಹಳ್ಳಿ ಗುಂಪು ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದ ದೇಶದ್ರೋಹಿಗಳನ್ನು ಅಮಾಯಕರು ಎಂದು ಬಿಂಬಿಸುವ ಪ್ರಯತ್ನಗಳಾಗುತ್ತಿವೆ ಎಂದು ಅವರು ದೂರಿದರು.