ಗಾಂಧಿನಗರ ವಿಧಾನಸಭಾ ಕ್ಷೇತ್ರ: ಓಕುಳಿಪುರ:,ಕೆಪಿಸಿಸಿ ಬೆಂಗಳೂರುನಗರ ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ವಿಭಾಗದ ಅಧ್ಯಕ್ಷರಾದ ಎ.ಪಿ.ಎಸ್.ರಾಜ್ ಕಾರ್ತಿಕ್ ರವರು ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಅಭಿಮಾನಿಗಳು ಮತ್ತು ಸ್ನೇಹಿತರು ಅದ್ದೂರಿಯಾಗಿ ಅಚರಿಸಿದರು.
ಸ್ಥಳೀಯ ಶಾಸಕರು, ಸಚಿವರಾದ ದಿನೇಶ್ ಗುಂಡೂರಾವ್ ರವರು ಮತ್ತು ಎ.ಪಿ.ಎಸ್.ರಾಜ್ ಕಾರ್ತಿಕ್ ರವರು ಹುಟ್ಚುಹಬ್ಬದ ಕೇಕ್ ಕತ್ತರಿಸಿದರು.
ಸಚಿವರಾದ ದಿನೇಶ್ ಗುಂಡೂರಾವ್ ರವರು ರಾಜ್ ಕಾರ್ತಿಕ್ ರವರಿಗೆ ಶುಭಾ ಕೋರಿ, ಸನ್ಮಾನಿಸಿದರು.
ಸಚಿವರಾದ ದಿನೇಶ್ ಗುಂಡೂರಾವ್ ರವರು ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಯಶ್ವಸಿಯಾಗಿ ಆಡಳಿತ ನಡೆಸುತ್ತಿದೆ, ಜನಪರ ಆಡಳಿತ ನೀಡಿ ಜನಮನ್ನಣೆ ಗಳಿಸಿದೆ.
5ಗ್ಯಾರಂಟಿ ಯೋಜನೆಗಳು ರಾಜ್ಯದ ಕೊಟ್ಯಂತರ ಕುಟುಂಬಗಳಿಗೆ ತಲುಪಿದೆ, ಆರ್ಥಿಕವಾಗಿ ಹಿಂದುಳಿದವರು ಈ ಯೋಜನೆಯ ಲಾಭ ಪಡೆದು ಆರ್ಥಿಕವಾಗಿ ಸಬಲರಾಗಬಹುದು.
ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವಪೂರ್ಣ ಮೈಲುಗಲ್ಲು ಸ್ಥಾಪಿಸಲಾಗಿದೆ.
ಪ್ರತಿಯೊಬ್ಬ ನಾಗರಿಕರಿಗೆ ಉತ್ತಮ ಹೈಟೆಕ್ ವೈದ್ಯಕೀಯ ಚಿಕಿತ್ಯೆ ಲಭಿಸಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಎ.ಪಿ.ಎಸ್.ರಾಜ್ ಕಾರ್ತಿಕ್ ರವರು ಮಾತನಾಡಿ ಕಾಂಗ್ರೆಸ್ ಪಕ್ಷ ಬಡವರ ಪರ ಹೋರಾಟ ಮಾಡುವ ಪಕ್ಷ .
ಮಾನ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ವಿಭಾಗ ಕೇಂದ್ರ ವಿಭಾಗದಲ್ಲಿ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.
ಪಕ್ಷ ಕೊಟ್ಟ ಜವಾಬ್ದಾರಿಯನ್ನು ಯಶ್ವಸಿಯಾಗಿ ನಿರ್ಭಾಯಿಸುತ್ತಾನೆ .5ಗ್ಯಾರಂಟಿ ಯೋಜನೆಗಳನ್ನು ಪ್ರತಿ ಮನೆಗಳಿಗೆ ತಲುಪಿಸಲಾಗುತ್ತಿದೆ ಮತ್ತು ಅರ್ಹ ಫಲಾನುಭವಿಗಳು ಕುರಿತು ಪರಿಶೀಲನೆ ಮಾಡಲಾಗುತ್ತಿದೆ.
ಮುಂಬರುವ ಲೋಕಸಭಾ ಚುನಾವಣೆ ಇಂಡಿಯ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ಖಚಿತ, ನಗರ ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಪರಿಶಿಷ್ಚ ವಿಭಾಗದಿಂದ ಸಂಘಟನೆ ಮಾಡಲಾಗಿದೆ , ಕಾಂಗ್ರೆಸ್ ಪಕ್ಷಕ್ಕೆ ಅತ್ಯಧಿಕ ಮತ ಬರುವಂತೆ ಹಗಲಿರುಳು ಶ್ರಮಿಸುವುದಾಗಿ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಮುಖಂಡರುಗಳು ಮತ್ತು ಕಾರ್ಯಕರ್ತರುಗಳು ಭಾಗವಹಿಸಿದ್ದರು.