ಕೀಳುಮಟ್ಟದ ರಾಜಕಾರಣ ಮಾಡುವುದು ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್‌ ಜೋಷಿ!

ಬೆಂಗಳೂರು: ಗಣರಾಜ್ಯೋತ್ಸವಕ್ಕೆ ಕರ್ನಾಟಕ ಸ್ತಬ್ಧಚಿತ್ರ ಆಯ್ಕೆ ಆಗದಿರುವುದನ್ನೇ ಮುಂದಿಟ್ಟುಕೊಂಡು ಕೀಳುಮಟ್ಟದ ರಾಜಕಾರಣ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಕಿವಿಮಾತು ಹೇಳಿದ್ದಾರೆ.

ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧಚಿತ್ರವನ್ನುಆಯ್ಕೆ ಮಾಡದೆ ಕರುನಾಡಿಗೆ ಕೇಂದ್ರ ಸರ್ಕಾರ (Central Govt) ಅವಮಾನ ಮಾಡಿದೆ ಎಂಬ ಸಿದ್ದರಾಮಯ್ಯ ಟೀಕೆಗೆ ಜೋಶಿ ಅವರು ಎಕ್ಸ್‌ ಮೂಲಕ ಪ್ರತ್ಯುತ್ತರ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರೇ ರಾಜಕೀಯ ಮಾಡಬೇಕು ನಿಜ. ಆದರೆ ಎಲ್ಲದರಲ್ಲೂ ರಾಜಕೀಯ ಮಾಡುವುದು, ಸುಳ್ಳು ಹೇಳಿಕೊಂಡು ಜನರನ್ನು ಮೂರ್ಖರನ್ನಾಗಿಸುವುದು ನಿಮಗಾಗಲಿ, ನಿಮ್ಮ ಸ್ಥಾನಕ್ಕಾಗಲಿ ಶೋಭೆ ತರದು ಎಂದು ಹೇಳಿದ್ದಾರೆ

Loading

Leave a Reply

Your email address will not be published. Required fields are marked *