ಜಿಯೋ ಪ್ರೀಪೇಯ್ಡ್ ಬಳಕೆದಾರರು ಇಲ್ಲೊಮ್ಮೆ ನೋಡಿ

ರಿಲಯನ್ಸ್ ಜಿಯೋದಿಂದ (Reliance Jio) ಈಗ ಜಿಯೋಟಿವಿ ಪ್ರೀಮಿಯಂ ಪ್ಲ್ಯಾನ್‌ಗಳನ್ನು (JioTV Premium Plans) ಪರಿಚಯಿಸಲಾಗುತ್ತಿದೆ. ಜಿಯೋ ಪ್ರೀಪೇಯ್ಡ್ ಬಳಕೆದಾರರು ಈಗ ಜಿಯೋಟಿವಿ ಪ್ರೀಮಿಯಂ ಪ್ಲ್ಯಾನ್‌ಗಳ ಜೊತೆಗೆ ನಿರಂತರ ಮನರಂಜನೆ ಆನಂದಿಸಬಹುದು. ಮಾಸಿಕ, ತ್ರೈಮಾಸಿಕ ಹಾಗೂ ವಾರ್ಷಿಕ ಪ್ಲ್ಯಾನ್‌ಗಳು ಇರಲಿದ್ದು, ಇದರ ಮೂಲಕ ಅನಿಯಮಿತ ಡೇಟಾ, ಧ್ವನಿ, ಎಸ್‌ಎಂಎಸ್‌ ಹಾಗೂ 14 ಪ್ರಮುಖ OTT (ಓವರ್ ದಿ ಟಾಪ್)ಗಳಿಗೆ ಚಂದಾದಾರಿಕೆ ಪಡೆಯಬಹುದು.

1,000 ರೂ. ಮೌಲ್ಯದ ಒಟಿಟಿ ಚಂದಾದಾರಿಕೆ ಯಾವುದೇ ಹೆಚ್ಚುವರಿ ಶುಲ್ಕ ಇಲ್ಲದೇ ಇದು ಲಭ್ಯವಾಗಲಿದೆ.

ಪ್ಲ್ಯಾನ್‌ಗಳು ತಿಂಗಳಿಗೆ 398 ರೂ.ನೊಂದಿಗೆ ಆರಂಭವಾಗುತ್ತದೆ. ಅಂದ ಹಾಗೆ ಈ 14 OTT ಗಳಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಹಾಗೂ ಪ್ರಾದೇಶಿಕ ಕಂಟೆಂಟ್ ಲಭ್ಯವಾಗುತ್ತದೆ. ಡಿಜಿಟಲ್ ಟಿವಿ, ಕ್ರೀಡಾ, ಒರಿಜಿನಲ್ಸ್, ಟೀವಿ ಶೋಗಳು ಮುಂತಾದವು ದೊರೆಯುತ್ತವೆ. ಪ್ರೀಪೇಯ್ಡ್ ಸೆಗ್ಮೆಂಟ್‌ನಲ್ಲಿ ವಾರ್ಷಿಕ ಪ್ಲ್ಯಾನ್‌ ಖರೀದಿ ಮಾಡುವಂಥ ಗ್ರಾಹಕರಿಗಾಗಿಯೇ ಒನ್ ಕ್ಲಿಕ್ ಕಾಲ್ ಸೆಂಟರ್ ಬೆಂಬಲ ಸಹ ದೊರೆಯುತ್ತದೆ.

ಇದೊಂದು‌ ಪ್ಲ್ಯಾನ್‌ ಖರೀದಿಸಿದವರಿಗೆ ವಿವಿಧ ಒಟಿಟಿಗಳಿಗೆ ಸಬ್‌ಸ್ಕ್ರೈಬ್ ಆಗಬೇಕು ಎಂಬ ಅಗತ್ಯ ಇರುವುದಿಲ್ಲ. ಹಲವು ಲಾಗಿನ್ ಐಡಿ ಬೇಕು, ಪ್ರತಿ ಆಯಪ್‌ ಗೂ ಪ್ರತ್ಯೇಕವಾಗಿ ಪಾಸ್‌ವರ್ಡ್‌ಬೇಕು ಅಂತಿಲ್ಲ. ಒಂದೇ ಕಡೆಗೆ ಎಲ್ಲ ವಿವಿಧ ಕಂಟೆಂಟ್‌ಗಳು ದೊರೆಯುತ್ತದೆ. ಇನ್ನೂ ಗ್ರಾಹಕರು ತಮಗೆ ಬೇಕಾದ ಕಂಟೆಂಟ್ ಹುಡುಕುವುದು ಸಹ ಸುಲಭವಾಗಿದ್ದು, ಶಿಫಾರಸಿಗಾಗಿಯೇ ಉತ್ತಮವಾದ ಹುಡುಕಾಟದ ಎಂಜಿನ್ ವ್ಯವಸ್ಥೆ ಇದೆ. ಅದೇ ರೀತಿ ಗ್ರಾಹಕರು ತಮ್ಮ ಆದ್ಯತೆಯಂತೆ ಮಾಸಿಕ, ತ್ರೈಮಾಸಿಕ ಹಾಗೂ ವಾರ್ಷಿಕ ಪ್ಲ್ಯಾನ್‌ಗಳ ಮಿತಿಯನ್ನು ಆರಿಸಿಕೊಳ್ಳಬಹುದು. ಒಂದೇ ಕ್ಲಿಕ್ ನಲ್ಲಿ ಕಸ್ಟಮರ್ ಕೇರ್ ಕಾಲ್ ಬ್ಯಾಕ್ ಸೇವೆ ಲಭ್ಯ ಇದ್ದು, ವಾರ್ಷಿಕ ಪ್ಲ್ಯಾನ್‌ ರೀಚಾರ್ಜ್‌ಗೆ ಇಎಂಐ ಸೌಲಭ್ಯ ಸಹ ದೊರೆಯಲಿದೆ.

Loading

Leave a Reply

Your email address will not be published. Required fields are marked *