ಕಲಬುರಗಿ: ರಾಜ್ಯ ಸರ್ಕಾರದ ಕಾರ್ಯ ವೈಖರಿಯನ್ನು ಟೀಕಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ಆಳಂದ ಶಾಸಕ ಸಿಎಂ ರಾಜಕೀಯ ಸಲಹೆಗಾರ ಬಿಆರ್ ಪಾಟೀಲ್ ಅವರು ಇದೀಗ ತಾನು ಬೀದರ್ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ರಾಜ್ಯಕ್ಕಿಂತಲೂ ರಾಷ್ಟ ರಾಜಕಾರಣದ ಮೇಲೆ ಆಸಕ್ತಿ ಜಾಸ್ತಿ. ಹೀಗಾಗಿ ಬೀದರ್ ಸಂಸತ್ ಕ್ಷೇತ್ರದಿಂದ ನಾನೂ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದರು.
ಹೌದು , ನಾನೂ ಬೀದರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ನನಗೆ ರಾಜ್ಯಕ್ಕಿಂತ ರಾಷ್ಟ್ರ ರಾಜಕಾರಣದ ಮೇಲೆ ಹೆಚ್ಚು ಆಸಕ್ತಿ ಇದೆ. ಹಿಂದೆ ರಾಮಕೃಷ್ಣ ಹೆಗಡೆ, ನಜೀರ ಸಾಬ್ ಇದ್ದಾಗಲೇ ನನ್ನನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡುವ ಮಾತಾಗಿತ್ತು. ಮುಂದೆ ಕಾರಣಾಂತರಗಳಿಂದ ಅದು ಕಾರ್ಯರೂಪಕ್ಕೆ ಬರಲಿಲ್ಲ. ರಾಷ್ಟ್ರಮಟ್ಟದ ನೀರಿನ ಚಳವಳಿ, ರೈತ ಚಳವಳಿಗಳಲ್ಲಿ ಭಾಗಿಯಾಗಿದ್ದೇನೆ. ಹಾಗಾಗಿ ನನಗೆ ರಾಷ್ಟ್ರ ರಾಜಕಾರಣದಲ್ಲಿ ಬೆಳೆಯುವ ಆಸೆ ಇದೆ ಎಂದರು.