ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳಾಗಿದ್ದ ಮೂವರು ಯುವಕರು ತಮ್ಮೂರಲ್ಲಿ ತಡರಾತ್ರಿ ಎತ್ತರದ ಕಟೌಟ್ ನಿಲ್ಲಿಸುವ ಪ್ರಯತ್ನದಲ್ಲಿದ್ದಾಗ ವಿದ್ಯುತ್ ಪ್ರವಹಿಸಿ ದಾರುಣ ಸಾವನ್ನಪ್ಪಿದ ಯುವಕರ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ತಲಾ 2 ಲಕ್ಷ ರೂ. ಚೆಕ್ ವಿತರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು.
ಕುಟುಂಬದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ಮಕ್ಕಳನ್ನು ಕಳೆದದುಕೊಂಡಿರುವ ಮೂರೂ ಕುಟುಂಬದ ಸದಸ್ಯರು ಇನ್ನೂ ಆಘಾತದಿಂದ ಚೇತರಿಸಿಕೊಂಡಿಲ್ಲ, ಅವರು ಸರ್ಕಾರದ ಮುಂದೆ ಯಾವುದೇ ಬೇಡಿಕೆಯನ್ನಿಡಲಿಲ್ಲ, ಚೆಕ್ ಸ್ವೀಕರಿಸಲು ಸಹ ಅವರು ನಿರಾಕರಿಸಿದರು ಎಂದು ಪಾಟೀಲ್ ಹೇಳಿದರು.