ಬೆಂಗಳೂರು: ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಈ ಕುರಿತು ಎಕ್ಸ್ನಲ್ಲಿ (X) ಪೋಸ್ಟ್ ಹಾಕಿರುವ ಅವರು, ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ (Manifesto) ನೀಡಿರುವ ಭರವಸೆಯಂತೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು (Guarantee Scheme) ಜಾರಿಗೆ ತಂದಿದ್ದೇವೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ. ಈ ಯೋಜನೆಗಳು ದುರುಪಯೋಗ ಆಗದಂತೆ ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿರುವುದು ನಿಮ್ಮೆಲ್ಲರ ಕರ್ತವ್ಯ ಎಂದಿದ್ದಾರೆ.