ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಆರಂಭ

ನವದೆಹಲಿ: ಭಾರತ್ ಜೋಡೋ ಯಾತ್ರೆ (Bharat Jodo Yatre) ಮೂಲಕ ಗಮನಸೆಳೆದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಮತ್ತೊಂದು ಸುತ್ತಿನ ಯಾತ್ರೆಗೆ ಸಿದ್ಧರಾಗಿದ್ದಾರೆ. ಇಂದಿನಿಂದ ಭಾರತ್ ನ್ಯಾಯ್ ಯಾತ್ರೆ ಎಂಬ ಹೆಸರಿನಲ್ಲಿ ಮಣಿಪುರದಿಂದ (Manipura) ಮಹಾರಾಷ್ಟ್ರದ (Maharastra) ಕಡೆಗೆ ರಾಗಾ ಯಾತ್ರೆ ಮಾಡಲಿದ್ದಾರೆ. ಮಣಿಪುರದಿಂದ ಮುಂಬೈಗೆ 67 ದಿನಗಳ ಅವಧಿಯಲ್ಲಿ ಪಾದಯಾತ್ರೆ ಮಾಡಲಿದ್ದಾರೆ. ಇಂದಿನಿಂದ ಮಾರ್ಚ್ 20 ರವರೆಗೆ ಇಂಫಾಲ್‍ನಿಂದ ಮುಂಬೈಗೆ ಯಾತ್ರೆ ಪ್ರಯಾಣಿಸಲಿದೆ.

ಭಾರತ್ ಜೋಡೋ ನ್ಯಾಯ್ ಯಾತ್ರೆಯು (Bharat Jodo Nyay Yatra) 66 ದಿನಗಳಲ್ಲಿ ಬಸ್ಸುಗಳು ಮತ್ತು ಕಾಲ್ನಡಿಗೆಯಲ್ಲಿ 6,713 ಕಿ.ಮೀಗಳನ್ನು ಕ್ರಮಿಸುವ ಗುರಿ ಹೊಂದಿದೆ. ಈ ಪಯಣದುದ್ದಕ್ಕೂ 14 ರಾಜ್ಯಗಳು, 110 ಜಿಲ್ಲೆಗಳು, 100 ಲೋಕಸಭಾ ಸ್ಥಾನಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳನ್ನು ದಾಟಿ, ಮಾರ್ಚ್ 20 ರಂದು ಮುಂಬೈನಲ್ಲಿ ಯಾತ್ರೆ ಮುಕ್ತಾಯಗೊಳ್ಳಲಿದೆ.

ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷದ ಪರವಾಗಿ ಜನ ಬೆಂಬಲವನ್ನು ಒಟ್ಟುಗೂಡಿಸುವ ಪ್ರಯತ್ನದ ಭಾಗವಾಗಿದೆ. ಭಾರತದ ಪೂರ್ವದಿಂದ ಪಶ್ಚಿಮದವರೆಗೆ ಹಾದುಹೋಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಯಾತ್ರೆಗೆ ಚಾಲನೆ ನೀಡಲಿದ್ದು ಕಾಂಗ್ರೆಸ್ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಎಲ್ಲ ಪ್ರಮುಖ ಕಾಂಗ್ರೇಸ್ ನಾಯಕರು ಉಪಸ್ಥಿತರಲಿದ್ದಾರೆ.

Loading

Leave a Reply

Your email address will not be published. Required fields are marked *