ಘಜ್ನಿ, ಘೋರಿ, ಮೊಘಲರ ಜೊತೆ ಗುರುತಿಸಿಕೊಳ್ಳುವ ಮಾನಸಿಕತೆ ಅಪಾಯಕಾರಿ: ಸಿ.ಟಿ.ರವಿ

ಚಿಕ್ಕಮಗಳೂರು: ಮಂದಿರ ಕೆಡವಿ ಕಟ್ಟಿದ ಮಸೀದಿಯಲ್ಲಿ ನಮಾಜ್ ಮಾಡಿದರೆ ಅದು ಹರಾಮ್ ಆಗುತ್ತದೆ ಅಂತಾ ಮುಸ್ಲಿಮರಿಗೂ ಒಂದು ದಿನ ಎನಿಸಬಹುದು ಎಂದು ಮಾಜಿ ಸಚಿವ ಸಿ.ಟಿ.ರವಿ (C.T.Ravi) ಹೇಳಿಕೆ ನೀಡಿದರು. ಚಿಕ್ಕಮಗಳೂರು (Chikkamagaluru) ನಗರದ ಕೋದಂಡರಾಮಸ್ವಾಮಿ ದೇವಾಲಯವನ್ನ ಶುಚಿ ಮಾಡಿದ ಬಳಿಕ ಮಾತನಾಡಿದ ಅವರು, ಘಜ್ನಿ, ಕಿಲ್ಜಿ, ಘೋರಿ, ಔರಂಗಜೇಬ್,

ಮೊಘಲರು ಹಾಗೂ ಟಿಪ್ಪು ಕಾಲದಲ್ಲಿ 42 ಸಾವಿರ ದೇಗುಲ ಧ್ವಂಸ ಮಾಡಿದ್ದಾರೆ. ಭಾರತೀಯ ಮುಸಲ್ಮಾನರು ಆ ದಾಳಿಕೋರರ ಜೊತೆ ತಮ್ಮ ಅಸ್ಮಿತೆಯನ್ನ ಗುರುತಿಸಿಕೊಳ್ಳುವುದಿಲ್ಲ. ಮುಸ್ಲಿಮರು ಭಾರತೀಯ ಸನಾತನ ಪರಂಪರೆಯಲ್ಲಿ ವಿಶ್ವಾಸವಿಟ್ಟು ಭಾರತದಲ್ಲಿ ಉಳಿದುಕೊಂಡಿದ್ದಾರೆ. ಅವರಿಗೂ ಒಂದು ದಿನ ಮನ ಪರಿವರ್ತನೆಯ ದಿನ ಬರಬಹುದು ಎಂದರು.

ಮುಸ್ಲಿಮರಿಗೂ ಒಂದು ದಿನ ಮಂದಿರ ಕೆಡವಿ ಕಟ್ಟಿದ ಮಸೀದಿಯಲ್ಲಿ ನಮಾಜ್ ಮಾಡಿದರೆ, ಅದು ಹರಾಮ್ ಆಗುತ್ತೆ ಎನಿಸಬಹುದು. ಹರಾಮ್ ಆಗುತ್ತೆ ಎನಿಸಿದ ದಿನ ಅವರು ಉದಾರತೆಯನ್ನ ಪ್ರದರ್ಶನ ಮಾಡಬಹುದು ಎಂದು ಸಿ.ಟಿ.ರವಿ ಹೇಳಿದರು. ಘಜ್ನಿ, ಘೋರಿ, ಮೊಘಲರ ಜೊತೆ ಗುರುತಿಸಿಕೊಳ್ಳುವ ಮಾನಸಿಕತೆ ಅಪಾಯಕಾರಿ. ಹಾಗಂತ ನಾವು ಎಲ್ಲಾ ಮುಸ್ಲಿಮರನ್ನ ಒಂದೇ ತಕ್ಕಡಿಯಲ್ಲಿಟ್ಟು ತೂಕ ಮಾಡೋದಿಲ್ಲ. ಇಲ್ಲಿನ ಮುಸ್ಲಿಮರು ಘಜ್ನಿ, ಘೋರಿ, ಬಾಬರ್ ಮಾನಸಿಕತೆಯಿಂದ ಹೊರಬರಬೇಕು. ಅವರಿಗೆ ಶಿಶುನಾಳ ಷರೀಫ್, ಅಬ್ದುಲ್ ಕಲಾಂ ಅವರು ಆದರ್ಶವಾಗಬೇಕು. ಆಗ ಮಾತ್ರ ನಮ್ಮಲ್ಲಿ ಸಹೋದರತ್ವ ಭಾವನೆ ಗಟ್ಟಿಯಾಗುತ್ತೆ ಎಂದು ತಿಳಿಸಿದರು.

Loading

Leave a Reply

Your email address will not be published. Required fields are marked *