ಅಯೋಧ್ಯೆಗೆ ಪಟಾಕಿ ಹೊತ್ತೊಯ್ಯುತ್ತಿದ್ದ ಟ್ರಕ್‌ʼಗೆ ಬೆಂಕಿ

ಉತ್ತರಪ್ರದೇಶ: ಅಯೋಧ್ಯೆಯ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಜನವರಿ 22ರಂದು  ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಗೆ ಪಟಾಕಿ ಹೊತ್ತೊಯ್ಯುತ್ತಿದ್ದ ಟ್ರಕ್‌ ಅಗ್ನಿಗೆ ಆಹುತಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಪೂರ್ವ ಕೊಟ್ವಾಲಿಯ ಖರ್ಗಿ ಖೇಡಾ ಗ್ರಾಮದ ಬಳಿ ಘಟನೆ ನಡೆದಿದೆ. ಸ್ಥಳೀಯರು ಇದನ್ನು ವೀಡಿಯೋ ಮಾಡಿ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಶ್ರೀರಾಮ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಸಂಭ್ರಮವನ್ನು ಕೊಂಡಾಡಲು ಟ್ರಕ್‌ವೊಂದರಲ್ಲಿ ಪಟಾಕಿ ಹೊತ್ತೊಯ್ಯಲಾಗುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಟ್ರಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಿಡಿ ಕ್ಷಣಾರ್ಧದಲ್ಲಿ ವ್ಯಾಪಿಸಿ ಪಟಾಕಿಗೆ ಹೊತ್ತಿಕೊಂಡಿದೆ. ಇದರಿಂದ ಬೆಂಕಿ ತೀವ್ರತೆ ಹರಡುವ ತೀವ್ರತೆ ಹೆಚ್ಚಾಹಿ, ಟ್ರಕ್‌ ಸಂಪೂರ್ಣ ಭಸ್ಮವಾಗಿದೆ. ಈ ಘಟನೆಯನ್ನು ಸ್ಥಳೀಯರು ವೀಡಿಯೋ ಮಾಡಿದ್ದು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

 

Loading

Leave a Reply

Your email address will not be published. Required fields are marked *