ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ಆಹ್ವಾನಿಸಲಾಗಿದೆ.
ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಅವರನ್ನು ಆಹ್ವಾನಿಸಿರುವ ಫೋಟೋಗಳನ್ನು ಕೊಹ್ಲಿ ಅವರ ಅಭಿಮಾನಿಗಳು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ಇದೇ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ (ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭ) ವಿಶ್ವದಾದ್ಯಂತ ಗಣ್ಯರು ಭಾಗವಹಿಸಲಿದ್ದಾರೆ. ದಕ್ಷಿಣ ಭಾರತದ ಕೆಲವು ಕ್ರೀಡಾಪಟುಗಳಿಗೆ ಮಾತ್ರ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ.
ಕ್ರಿಕೆಟ್ ದಿಗ್ಗಜರ ಸಮಾಗಮ
ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೂ ಈಗಾಗಲೇ ಐತಿಹಾಸಿಕ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಕಿಂಗ್ ಕೊಹ್ಲಿ ಸಹ ರಾಮಮಂದಿರದ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದು, ಈ ಸಮಾರಂಭ ಕ್ರಿಕೆಟ್ ದಿಗ್ಗಜರು ಸಮಾಗಮಕ್ಕೆ ಸಾಕ್ಷಿಯಾಗಲಿದೆ.