ಅಮೃತಸರ: ದುಬೈ-ಅಮೃತಸರ ವಿಮಾನದಲ್ಲಿ ಗಗನಸಖಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಪುರುಷ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಪಂಜಾಬ್‌ನ ಜಲಂಧರ್‌ನ ಕೋಟ್ಲಿ ಗ್ರಾಮದವರಾದ ರಾಜಿಂದರ್ ಸಿಂಗ್ ಅವರು ಗಗನಸಖಿಯೊಂದಿಗೆ ತೀವ್ರ ವಾಗ್ವಾದಕ್ಕಿಳಿದಿದ್ದು, ಶನಿವಾರ ಆಕೆಗೆ ಕಿರುಕುಳ ನೀಡಿದ್ದಾನೆ.
ಘಟನೆಯನ್ನು ಗಗನಸಖಿ ಸಿಬ್ಬಂದಿಯ ಗಮನಕ್ಕೆ ತಂದಿದ್ದು, ಆರೋಪಿಯು ಕುಡಿದ ಅಮಲಿನಲ್ಲಿದ್ದನು.
ನಂತರ ಸಿಬ್ಬಂದಿ ಸದಸ್ಯರು ಅಮೃತಸರ ನಿಯಂತ್ರಣ ಕೊಠಡಿಗೆ ವಿಷಯದ ಬಗ್ಗೆ ತಿಳಿಸಿದ್ದು, ಏರ್‌ಲೈನ್‌ನ ಸಹಾಯಕ ಭದ್ರತಾ ವ್ಯವಸ್ಥಾಪಕರು ಪೊಲೀಸ್ ದೂರು ದಾಖಲಿಸಿದ್ದಾರೆ. ವಿಮಾನ ಶ್ರೀ ಗುರು ರಾಮದಾಸ್ ಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಆರೋಪಿಯನ್ನು ಬಂಧಿಸಲಾಯಿತು.
ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಮತ್ತು ಸೆಕ್ಷನ್ 509 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.