ಕಾರವಾರ:– ನಮ್ಮದು ವೀರ ಸಂತಾನ, ಹೇಡಿಗಳ ಸಂತಾನ ಅಲ್ಲ ಎಂದು ಸಂಸದ ಅನಂತಕುಮಾರ್ ಹೆಗಡೆ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಒಂದು ಕೆನ್ನೆಗೆ ಹೊಡೆದ್ರೆ ಮತ್ತೊಂದು ಕೆನ್ನೆ ತೋರಿಸುವ ಸಂತಾನ ನಮ್ಮದಲ್ಲ. ಒಂದು ಕೆನ್ನೆಗೆ ಹೊಡೆದರೆ ನಿಮ್ಮ ತಲೆಯನ್ನೇ ತೆಗೆಯುವ ಸಂತಾನದವರು ನಾವು. ನಮ್ಮದು ವೀರ ಸಂತಾನ, ಹೇಡಿಗಳ ಸಂತಾನ ಅಲ್ಲ ಎಂದು ಗುಡುಗಿದರು.
ನಮ್ಮಮ್ಮ ತನ್ನ ಎದೆಹಾಲು ಕುಡಿಸಿ ಬೆಳೆಸಿದ್ದಾರೆ, ಬೇವರ್ಸಿ ಹಾಲನ್ನು ಅಲ್ಲ. ತಾಯಿ ಹಾಲು ಕುಡಿದಿದ್ದಕ್ಕೆ ಗಂಡುಭಾಷೆ ಹುಟ್ಟಿನಿಂದಲೇ ಬಂದಿದೆ. ಏಕವಚನದಲ್ಲಿ ನೀವು ಮಾತಾಡಿದ್ರೆ ನಾವೂ ಏಕಚನದಲ್ಲಿ ಮಾತನಾಡುತ್ತೇವೆ. ಸಿಎಂ ಸಿದ್ದರಾಮಯ್ಯನವರೇ ನೀವು ಸಭ್ಯತೆ ಬಗ್ಗೆ ಕಲಿತುಕೊಳ್ಳಿ. ವಿಧಾನಸಭೆಯಲ್ಲಿ ಶಾಸಕರಿಗೆ, ಪತ್ರಕರ್ತರಿಗೆ ಏಕವಚನದಲ್ಲಿ ಮಾತಾಡುತ್ತೀರಿ. ನಮಗೆ ತಾಕತ್ ಇಲ್ಲವಾ?, ನಮಗೆ ಮಾತನಾಡಲು ಬರೋದಿಲ್ಲವಾ? ಎಂದು ವಾಗ್ದಾಳಿ ನಡೆಸಿದರು.