ಟೆಸ್ಟ್ ಕ್ರಿಕೆಟ್ ಸರಣಿಯಿಂದ ಹಿಂದೆ ಉಳಿದ ವಿರಾಟ್‌ ಕೊಹ್ಲಿ

ಹೈದರಾಬಾದ್: ಇಂಗ್ಲೆಂಡ್ (England) ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಎರಡು ಪಂದ್ಯಗಳಿಂದ ಟೀಮ್ ಇಂಡಿಯಾ (Team India) ಆಟಗಾರ ವಿರಾಟ್ ಕೊಹ್ಲಿ (Virat Kohli) ಹೊರಗುಳಿದಿದ್ದಾರೆ.

ಐದು ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯ ಜ.25 ರಂದು ಹೈದರಾಬಾದ್‍ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.

ವೈಯಕ್ತಿಕ ಕಾರಣದಿಂದ ಕೊಹ್ಲಿ ಈ ಸರಣಿಯ ಮೊದಲ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ತಂಡದಿಂದ ಬಿಡುಗಡೆ ಮಾಡುವಂತೆ ಕೊಹ್ಲಿ ಬಿಸಿಸಿಐಗೆ ಮನವಿ ಮಾಡಿದ್ದರು. ಈ ಮನವಿಗೆ ಬಿಸಿಸಿಐ ಒಪ್ಪಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ.

ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಕೊಹ್ಲಿ ಅಲಭ್ಯರಾದರೂ, ಟೆಸ್ಟ್ ತಂಡದಲ್ಲಿ ಅವರನ್ನು ಉಳಿಸಿಕೊಳ್ಳಲು ನಿರ್ಧಾರ ಮಾಡಿದೆ. ಸರಣಿಯ ಎರಡನೇ ಪಂದ್ಯವು ಫೆ.2 ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ವಿರಾಟ್ ಕೊಹ್ಲಿ ಸರಣಿಯ ಉಳಿದ ಮೂರು ಪಂದ್ಯಗಳಿಗೆ ಮರಳುವ ನಿರೀಕ್ಷೆಯಿದೆ

ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಕೆಎಸ್ ಭರತ್ (ವಿ.ಕೀ), ಧ್ರುವ್ ಜುರೆಲ್ (ವಿ.ಕೀ), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಟ್ರೀತ್ ಬುಮ್ರಾ (ಉ.ನಾ) ಮತ್ತು ಅವೇಶ್ ಖಾನ್.

Loading

Leave a Reply

Your email address will not be published. Required fields are marked *