ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಲ್ಲಿ ಇದೀಗ ಸಿಎಂ ಹುದ್ದೆಗಾಗಿ ಪೈಪೋಟಿ ಶುರುವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಭೇಟಿಯಾಗಲು ದೆಹಲಿಗೆ ಹೊರಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಒಬ್ಬನೇ ದೆಹಲಿಗೆ ಬರಲು ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಇಂದು ಒಬ್ಬನೇ ದೆಹಲಿಗೆ ಹೋಗುತ್ತಿದ್ದೇನೆ ಎಂದರು.
ನಾನು ಆರೋಗ್ಯವಾಗಿದ್ದೇನೆ. ನನಗೆ ಕಾಂಗ್ರೆಸ್ ಪಕ್ಷವೇ ದೊಡ್ಡ ಶಕ್ತಿ, ಕಾಂಗ್ರೆಸ್ ನನಗೆ ದೇವಸ್ಥಾನವಿದ್ದಂತೆ ರಾಜ್ಯದ ಜನರು ನಮಗೆ ಆಶೀರ್ವಾದ ಮಾಡಿದ್ದಾರೆ. ಅವರ ನಂಬಿಕೆಯನ್ನು ಉಳಿಸಿಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.