ರಾಯಲ್ ಚಾಲೆಂಜರ್ಸ್ ಬೆಂಗಳೂರುತಂಡದ ಖ್ಯಾತ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.
ಗ್ಲೆನ್ ಮ್ಯಾಕ್ಸ್ವೆಲ್ ಅಡಿಲೇಡ್ನಲ್ಲಿ ಪಾರ್ಟಿ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ನಂತರ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆದರೆ ಫೆಬ್ರವರಿ 2 ರಿಂದ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರು ಪಂದ್ಯಗಳ ODI ಸರಣಿಯಿಂದ ಅವರು ಹೊರಬಿದ್ದಿದ್ದಾರೆ. ಮಾಧ್ಯಮಗಳ ವರದಿಯ ಪ್ರಕಾರ ಮ್ಯಾಕ್ಸ್ವೆಲ್ ಮದ್ಯದ ಅಮಲಿನಲ್ಲಿದ್ದರು ಎನ್ನಲಾಗುತ್ತಿದೆ. ಸದ್ಯ ಕ್ರಿಕೆಟ್ ಆಸ್ಟ್ರೇಲಿಯಾ (CA) ಈಗ ಮ್ಯಾಕ್ಸ್ವೆಲ್ ಪ್ರಕರಣದ ತನಿಖೆ ನಡೆಸುತ್ತಿದೆ. ‘ಡೈಲಿ ಟೆಲಿಗ್ರಾಫ್’ ಪ್ರಕಾರ, ಮ್ಯಾಕ್ಸ್ವೆಲ್ ಕುಡಿದಿದ್ದರು ಮತ್ತು ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಬ್ರೆಟ್ ಲೀ ಅವರ ಬ್ಯಾಂಡ್ ‘ಸಿಕ್ಸ್ ಅಂಡ್ ಔಟ್’ ಸಂಗೀತ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದರು.
ಈ ಸಮಯದಲ್ಲಿ, ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಅನಾರೋಗ್ಯಕ್ಕೆ ಒಳಗಾದರು. ಅವರನ್ನು ರಾಯಲ್ ಅಡಿಲೇಡ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಮನೆಗೆ ವಾಪಾಸಾಗಿದ್ದಾರೆ. ವರದಿಗಳ ಪ್ರಕಾರ, ಕ್ರಿಕೆಟ್ ಆಸ್ಟ್ರೇಲಿಯಾ ಈ ವಾರಾಂತ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಒಳಗೊಂಡ ಘಟನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಹುಡುಕುತ್ತಿದೆ.
ಇನ್ನು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಘಟನೆಯ ಕುರಿತು ಪ್ರತಿಕ್ರೀಯೆಯನ್ನು ನೀಡಿದೆ. ಯಾವುದೇ ಕಾರಣಕ್ಕೂ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ತಂಡದಿಂದ ಬದಲಾಯಿಸುವ ಪ್ರಶ್ನೆಯಿಲ್ಲ. ಬಿಗ್ ಬ್ಯಾಷ್ ಲೀಗ್ ನಂತರ ಮತ್ತು ಅವರ ವೈಯಕ್ತಿಕ ದಾಖಲೆಗಳ ಆಧಾರದ ಮೇಲೆ ಅವರು ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಅಲ್ಲದೇ ಮ್ಯಾಕ್ಸ್ವೆಲ್ ಟಿ20 ಸರಣಿಗೆ ಮರಳುವ ನಿರೀಕ್ಷೆಯಿದೆ.