ಬೆಂಗಳೂರು: ದಿನಾಂಕ 29-03-2023ರಿಂದ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿತ್ತು. ಮೇ.10ರಂದು ಮತದಾನ, ಮೇ.13ಕ್ಕೆ ಫಲಿತಾಂಶ ಘೋಷಣೆ ಬೆನ್ನಲ್ಲೇ, ಚುನಾವಣಾ ನೀತಿ ಸಂಹಿತೆಯನ್ನು ಕೇಂದ್ರ ಚುನಾವಣಾ ಆಯೋಗ ಹಿಂಪಡೆದಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ಕೇಂದ್ರ ಚುನಾವಣಾ ಆಯೋಗದ ಸೆಕ್ರೇಟರಿ ಅಶ್ವಿನ್ ಕುಮಾರ್ ಅವರು, ವಿಧಾನಸಭಾ ಚುನಾವಣೆ ಘೋಷಣೆಯ ನಂತ್ರ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಜಾರಿಗೆ ತರಲಾಗಿತ್ತು. ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ ದಿನಾಂಕದಿಂದ ಮತ್ತು ಅದು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಇದು ಜಾರಿಯಲ್ಲಿರುತ್ತದೆ ಎಂದಿದ್ದಾರೆ.
ಈಗ, ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದ ಫಲಿತಾಂಶಗಳು ಕರ್ನಾಟಕ 2023 ಮತ್ತು ರಾಜ್ಯಗಳ ಸಂಸದೀಯ / ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಮೇಘಾಲಯ, ಒಡಿಶಾ, ಪಂಜಾಬ್ ಮತ್ತು ಉತ್ತರ ಪ್ರದೇಶಗಳನ್ನು ಆಯಾ ರಿಟರ್ನಿಂಗ್ ಗಳು ಘೋಷಿಸಿವೆ. ಈ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆಯು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ.