ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದಿನಿಂದ ಆರಂಭಗೊಂಡ ಟೀಂ ಇಂಡಿಯಾ (Team India) ಹಾಗೂ ಇಂಗ್ಲೆಂಡ್ (England) ವಿರುದ್ಧದ ಮೊದಲ ಟೆಸ್ಟ್ ಪಂದ್ಯದ (IND vs ENG 1st Test) ಮೊದಲ ಇನ್ನಿಂಗ್ಸ್‌ನ 64.3 ಓವರ್‌ಗಳಲ್ಲಿ 246 ರನ್‍ಗಳಿಗೆ ಪ್ರವಾಸಿ ತಂಡ ಸರ್ವಪತನ ಕಂಡಿದೆ. ಈ ಮೂಲಕ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡಕ್ಕೆ ಟೀಂ ಇಂಡಿಯಾ ಶಾಕ್ ನೀಡಿದೆ.
ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಪಂದ್ಯದ ಆರಂಭದಿಂದಲೇ ಭಾರತೀಯ ಬೌಲರ್‌ಗಳ ದಾಳಿಗೆ ಬೆಚ್ಚಿದ ಇಂಗ್ಲೆಂಡ್ ತಂಡ ಕೇವಲ 64.3 ಓವರ್‌ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. 246 ರನ್‍ಗೆ ಅಲೌಟ್ ಆಗಿದೆ.
ಭಾರತದ ಬೌಲರ್‌ಗಳಾದ ಆರ್.ಅಶ್ವಿನ್ 21 ಓವರ್‌ಗಳಿಗೆ 68 ರನ್ ನೀಡಿ 3 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ 18 ಓವರ್‍ಗೆ 88 ರನ್ ನೀಡಿ 3 ವಿಕೆಟ್ ಪಡೆದರು. ಉಳಿದಂತೆ ಅಕ್ಷರ್ ಪಟೇಲ್ 2 ವಿಕೆಟ್ ಮತ್ತು ಜಸ್ಪ್ರೀತ್ ಬುಮ್ರಾ 2 ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ಟೀಂ ಇಂಡಿಯಾದ ಸ್ಪಿನ್ನರ್‌ಗಳು ಅಬ್ಬರದ ಬೌಲಿಂಗ್ ರುಚಿಯನ್ನು ಇಂಗ್ಲೆಂಡ್‍ಗೆ ತೋರಿಸಿದ್ದಾರೆ.